ಕೇಶ ವಿನ್ಯಾಸ ತಂದಿಟ್ಟ ಆಪತ್ತು; ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ!
ಹೇರ್ ಸ್ಟ್ರೈಟ್ನಿಂಗ್ ಮಾಡಿಕೊಂಡ ಬಳಿಕ ನಿರಂತರವಾಗಿ ಕೂದಲು ಉದುರುವಿಕೆಯಿಂದ ಬೇಸರಗೊಂಡ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ...

Published On :
ಮಡಿಕೇರಿ: ಹೇರ್ ಸ್ಟ್ರೈಟ್ನಿಂಗ್ ಮಾಡಿಕೊಂಡ ಬಳಿಕ ನಿರಂತರವಾಗಿ ಕೂದಲು ಉದುರುವಿಕೆಯಿಂದ ಬೇಸರಗೊಂಡ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ.
18ರ ಹರೆಯದ ನೇಹಾ ಗಂಗಮ್ಮ ಮೃತ ವಿದ್ಯಾರ್ಥಿನಿ. ಆಕೆ ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ಧಳು. ಕೆಲ ದಿನಗಳ ಹಿಂದೆ ವಿವಿ ಮೊಹಲ್ಲಾದ ಬ್ಯೂಟಿ ಪಾರ್ಲರ್ ವೊಂದರಲ್ಲಿ ಹೇರ್ ಸ್ಟ್ರೈಟ್ನಿಂಗ್ ಮಾಡಿಕೊಂಡಿದ್ದಳು.
ಕೆಲ ದಿನಗಳಲ್ಲೇ ನಿರಂತರವಾಗಿ ಕೂದಲು ಉದುರಲು ಶುರವಾಗಿದೆ. ಇದರಿಂದ ಬೇಸರಗೊಂಡು ಕಾಲೇಜಿಗೂ ಹೋಗದೆ ಪಿಜಿಯಲ್ಲಿ ಉಳಿದುಕೊಂಡಿದ್ದಾಳೆ. ಕೊನೆಗೆ ದಾರಿ ಕಾಣದೆ ಕೊಡಗಿನ ಮನೆಗೆ ಆಗಮಿಸಿದ ಆಕೆ ಮನೆಗೆ ತೆರಳದೆ ಸಮೀಪದಲ್ಲಿರುವ ಬಾಳೆಲೆಯ ಲಕ್ಷ್ಮಣ ತೀರ್ಥ ನದಿಗೆ ಹಾರಿ ಸಾವಿಗೆ ಶರಣಾಗಿದ್ದಾಳೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


