ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯ, ಸೆಸ್ ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ: ಡಿಸಿಎಂ
ಡೀಸೆಲ್ ಬೆಲೆ ಸತತ ಏರಿಕೆಯಾಗುತ್ತಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದು ಅನಿರ್ವಾಯವಾಗಿದೆ....

Published On :
ತುಮಕೂರು: ಡೀಸೆಲ್ ಬೆಲೆ ಸತತ ಏರಿಕೆಯಾಗುತ್ತಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಳ ಮಾಡುವುದು ಅನಿರ್ವಾಯವಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಬುಧವಾರ ಹೇಳಿದ್ದಾರೆ. ಸ್ಪಷ್ಟಪಡಿಸಿದ್ದಾರೆ.
ಇಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಪರಮೇಶ್ವರ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ 16 ಬಾರಿ ಇಂಧನ ಬೆಲೆ ಏರಿಕೆಯಾಗಿದೆ. ಡೀಸೆಲ್ ಬೆಲೆ ಏರಿಕೆಯಿಂದಾಗಿ ಬಸ್ ಪ್ರಯಾಣ ದರ ಹೆಚ್ಚಳ ಮಾಡಬೇಕಾಗಿದೆ. ಇಲ್ಲದಿದ್ದರೆ ಸಂಸ್ಥೆ ನಷ್ಟಕ್ಕೆ ಗುರಿಯಾಗುತ್ತದೆ ಎಂದರು.
ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆಗೆ ಸಂಬಂಧಿಸಿದಂತೆ ಸಾರಿಗೆ ಸಚಿವರು ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲಿಸಲಾಗುತ್ತಿದೆ ಎಂದರು.
ಇದೇ ವೇಳೆ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಅನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಸ್ಪಷ್ಟಪಡಿಸಿದರು.
ನಿನ್ನೆಯಷ್ಟೆ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಬಸ್ ಪ್ರಯಾಣ ದರ ಏರಿಕೆ ವಿಷಯ ಪ್ರಸ್ತಾಪಿಸಿದ್ದರು. ಅದಕ್ಕೆ ಪೂರಕವೆಂಬಂತೆ ಇಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಕೂಡ ಟಿಕೆಟ್ ದರ ಏರಿಕೆ ಬಗ್ಗೆ ಮಾತನಾಡಿರುವುದು ಗಮನಿಸಿದರೆ ಸದ್ಯದಲ್ಲೇ ಪ್ರಯಾಣಿಕರಿಗೆ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಿ ಪರಮೇಶ್ವರG Parameshwarಇಂಧನ ಬೆಲೆ ಏರಿಕೆKSRTC bus fare hikerising fuel priceಕೆಎಸ್ ಆರ್ ಟಿಸಿ ಬಸ್ ಪ್ರಯಾಣದರ ಏರಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


