2ನೇ ಶನಿವಾರ ಹೆಚ್ ಡಿ ಕುಮಾರಸ್ವಾಮಿ ಜನತಾದರ್ಶನ ಇರಲ್ಲ -ಮುಖ್ಯಮಂತ್ರಿ ಕಚೇರಿ
ಸೆಪ್ಟೆಂಬರ್ 8 ಎರಡನೇ ಶನಿವಾರವಾಗಿರುವುದರಿಂದ ಅಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಜನತಾ ದರ್ಶನ ಇರುವುದಿಲ್ಲ.

ಬೆಂಗಳೂರು: ಸೆಪ್ಟೆಂಬರ್ 8 ಎರಡನೇ ಶನಿವಾರವಾಗಿರುವುದರಿಂದ ಅಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಜನತಾ ದರ್ಶನ ಇರುವುದಿಲ್ಲ.
ಅಂದು ಸಾರ್ವತ್ರಿಕ ರಜೆ ಆಗಿರುವುದರಿಂದ ಕುಮಾರಸ್ವಾಮಿ ಅವರು ಜನತಾ ದರ್ಶನ ನಡೆಸುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ತಿಳಿದುಬಂದಿದೆ.
ನಂತರ ಮುಂದಿನ ಜನತಾದರ್ಶನದ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಲಾಗಿದೆ. ಕುಮಾರಸ್ವಾಮಿ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಜನರಿಂದ ಅಹವಾಲು ಆಲಿಸುತ್ತಾರೆ. ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕೂಡಾ ಒದಗಿಸಿದ್ದಾರೆ.
ಕೆಲವು ಸಂದರ್ಭಗಳಲ್ಲಿ ರಾತ್ರಿಯವರೆಗೂ ಜನತಾ ದರ್ಶನ ವಿಸ್ತರಿಸುವ ಮೂಲಕ ಕುಮಾರಸ್ವಾಮಿ ಹೊಸ ದಾಖಲೆಯನ್ನೇ ಬರೆದಿದ್ದು, ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


