ಮೇಕೆದಾಟು ಯೋಜನೆಗೆ ಮತ್ತೆ ತಮಿಳುನಾಡು ಕ್ಯಾತೆ
ಕಾವೇರಿ ನದಿಗೆ ಮೇಕೆದಾಟು ಬಳಿ ಜಲಾಶಯ ನಿರ್ಮಿಸುವ ಕರ್ನಾಟಕದ ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ...

Published On :
ಬೆಂಗಳೂರು: ಕಾವೇರಿ ನದಿಗೆ ಮೇಕೆದಾಟು ಬಳಿ ಜಲಾಶಯ ನಿರ್ಮಿಸುವ ಕರ್ನಾಟಕದ ಯೋಜನೆ ಬಗ್ಗೆ ತಮಿಳುನಾಡು ಸರ್ಕಾರ ಮತ್ತೆ ಕ್ಯಾತೆ ತೆಗೆದಿದೆ.
ಮೇಕೆದಾಟು ಯೋಜನೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿಯವರು, ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರದ ಜಲ ಆಯೋಗದ ಬಳಿ ಅನುಮತಿ ಕೇಳಿದೆ. ಕರ್ನಾಟಕ ಈ ಮನವಿ ಏಕಪಕ್ಷೀಯ ನಿರ್ಧಾರವಾಗಿದೆ ಎಂದೂ ದೂರಿದ್ದಾರೆ.
ಮೇಕೆದಾಟು ಜಲಾಶಯ ನಿರ್ಮಾಣ ಪ್ರಸ್ತಾಪಕ್ಕೆ ಕೇಂದ್ರ ಜಲ ಆಯೋಗದ ಅನುಮತಿ ಪಡೆಯಲು ಕರ್ನಾಟಕ ಮುಂದಾಗಿದ್ದು, ಈ ಮೂಲಕ ಏಕಪಕ್ಷೀಯವಾಗಿ ಪ್ರಯತ್ನ ನಡೆಸುತ್ತಿದೆ. ಕರ್ನಾಟಕವು ಕೇಂದ್ರ ಜಲ ಆಯೋಗದ ಬಳಿ ತೆರಳಿರುವುದು ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಕರಣ ನೀಡಿರುವ ಅಂತಿಮ ತೀರ್ಪು ಮತ್ತು ಸುಪ್ರೀಂಕೋರ್ಟ್ ಆದೇಶದ ಉಲ್ಲಂಘನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ರೂ.5,912 ಕೋಟಿ ಮೌಲ್ಯದ ಮೇಕೆದಾಟು ಜಲಾಶಯ ಹಾಗೂ ಕುಡಿಯುವ ನೀರು ಯೋಜನೆ ಕಾರ್ಯಸಾಧು ವರದಿಗೆ ಅನುಮತಿ ಕೋರುವಾಗ ಕರ್ನಾಟಕ ರಾಜ್ಯವು ತಮಿಳುನಾಡಿಗೆ ಮಾಹಿತಿಯೇ ನೀಡಿಲ್ಲ. ಹೀಗಾಗಿ ಅನುಮತಿ ನೀಡುವ ಮುಂದಿನ ಪ್ರಕ್ರಿಯೆ ತಡೆಗೆ ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಬೇಕು. ಜೊತೆಗೆ ಕೇಂದ್ರ ಜಲ ಆಯೋಗವು, ಕರ್ನಾಟಕದ ಪ್ರಸ್ತಾಪವನ್ನು ಸ್ವೀಕರಿಸುವ ಬದಲು, ವಿಷಯಕ್ಕೆ ಸಂಬಂಧಿಸಿ ತಮಿಳುನಾಡಿನ ಸಮ್ಮತಿ ಪಡೆಯುವಂತೆ ಕರ್ನಾಟಕಕ್ಕೆ ನಿರ್ದೇಶಿಸಬೇಕೆಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


