ಶಿಕ್ಷಕರಿಗೆ ವೇತನ ನೀಡಲು ರಾಜ್ಯ ಬೊಕ್ಕಸದಲ್ಲಿ ಹಣವಿದೆ: ಸಿಎಂ ಕುಮಾರಸ್ವಾಮಿ
ಸರ್ಕಾರಿ ಶಾಲೆಯ ಶಿಕ್ಷಕರಿಗೆ ಕಳೆದ ಆರು ತಿಂಗಳಿನಿಂದ ವೇತನ ನೀಡಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ...

ಬೆಂಗಳೂರು: ಸರ್ಕಾರಿ ಶಾಲೆಯ ಶಿಕ್ಷಕರಿಗೆ ಕಳೆದ ಆರು ತಿಂಗಳಿನಿಂದ ವೇತನ ನೀಡಿಲ್ಲ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ವೇತನ ನೀಡಿಕೆ ಬಗ್ಗೆ ಇಲಾಖೆಯ ಅಧಿಕಾರಿಗಳನ್ನು ವಿಚಾರಿಸಿದಾಗ ಸಂಬಂಧಪಟ್ಟ ಹಣವನ್ನು ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಿರುವುದರಿಂದ ಈ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಈ ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವಂತೆ ಹಣಕಾಸು ಮತ್ತು ಶಿಕ್ಷಣ ಇಲಾಖೆಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ನಿನ್ನೆ ಸರ್ಕಾರದ ವತಿಯಿಂದ ನಡೆದ ಶಿಕ್ಷಕರ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಬೊಕ್ಕಸದಲ್ಲಿ ಶಿಕ್ಷಕರಿಗೆ ವೇತನ ನೀಡಲು ಹಣದ ಕೊರತೆಯಿಲ್ಲ. ನಮ್ಮಲ್ಲಿ ಸಾಕಷ್ಟು ಹಣವಿದೆ. ಸರ್ಕಾರ ಯಾವುದೇ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.
ತಮಗೆ ವೇತನ ಬಿಡುಗಡೆ ಮಾಡಲು ಶಿಕ್ಷಕರು, ಸ್ಥಳೀಯ ಮತ್ತು ರಾಜ್ಯ ಮಟ್ಟದಲ್ಲಿ ಅಧಿಕಾರಿಗಳ ಮುಂದೆ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ವೇತನ ಬಿಡುಗಡೆ ವಿಳಂಬಕ್ಕೆ ಹಣಕಾಸು ಇಲಾಖೆಯೇ ಕಾರಣ ಎಂದು ಅದರತ್ತ ಬೆರಳು ತೋರಿಸುತ್ತಿದ್ದಾರೆ. ಹಣಕಾಸು ಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವೇ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸಿದೆ ಎನ್ನುತ್ತಿದ್ದಾರೆ.
ಶಿಕ್ಷಕರಿಂದ ಸಿಕ್ಕಿರುವ ಮಾಹಿತಿ ಪ್ರಕಾರ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷ ಅಭಿಯಾನ(ಆರ್ ಎಂಎಸ್ಎ)ಯಡಿ ಸುಮಾರು 25 ಸಾವಿರ ಶಿಕ್ಷಕರು ನೇಮಕವಾಗಿದ್ದು ಅವರು ಬೆಳ್ತಂಗಡಿ, ಮಧುಗಿರಿ, ಗದಗ ಮತ್ತು ಬಂಟ್ವಾಳ ಸೇರಿದಂತೆ ಒಟ್ಟು 14 ತಾಲ್ಲೂಕುಗಳಲ್ಲಿದ್ದಾರೆ. ಈ ಬಗ್ಗೆ ಸ್ಥಳೀಯ ಬ್ಲಾಕ್ ಶಿಕ್ಷಣಾಧಿಕಾರಿ ಮತ್ತು ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಿದಾಗ, ಕೆಲವು ತಾಂತ್ರಿಕ ದೋಷಗಳಿಂದ ವೇತನ ವಿಳಂಬವಾಗಿದೆ ಎಂದರು. ರಾಜ್ಯಮಟ್ಟದ ಅಧಿಕಾರಿಗಳನ್ನು ಕೇಳಿದಾಗ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದಿಂದ ಹಣ ಬಂದಿಲ್ಲ ಎನ್ನುತ್ತಾರೆ ಎಂದು ಶಿಕ್ಷಕರೊಬ್ಬರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ್ದಾರೆ.
ಈ ಬಗ್ಗೆ ಆರ್ ಎಂಎಸ್ಎ ಅಧಿಕಾರಿಗಳನ್ನು ಕೇಳಿದರೆ, ಅವರು ಖಜಾನೆ-2 ಸಾಫ್ಟ್ ವೇರ್ ದೋಷವೇ ಕಾರಣ ಎನ್ನುತ್ತಾರೆ. ಅದು ಮಾನವ ಸಂಪನ್ಮೂಲ ನಿರ್ವಹಣೆ ವ್ಯವಸ್ಥೆಯನ್ನು ನಿರ್ವಹಿಸುತ್ತಿದ್ದು ಅದರಲ್ಲಿ ಸುಮಾರು 12 ಸಾವಿರ ಶಿಕ್ಷಕರ ಕೋಡ್ ಸಂಖ್ಯೆಯನ್ನು ತಪ್ಪಾಗಿ ಅಪ್ ಲೋಡ್ ಮಾಡಿದ ಕಾರಣ ತಾಂತ್ರಿಕ ದೋಷ ಕಂಡುಬಂದಿದೆ ಎನ್ನುತ್ತಾರೆ.
ಸುಮಾರು 25 ಸಾವಿರ ಶಿಕ್ಷಕರು ಆರ್ ಎಂಎಸ್ಎಯಡಿ ನೇಮಕಗೊಂಡಿದ್ದಾರೆ. ಹೀಗಾಗಿ ಮಾನವ ಸಂಪನ್ಮೂಲ ಇಲಾಖೆಯಿಂದ ಅವರಿಗೆ ವೇತನ ನೀಡಲಾಗುತ್ತದೆ. ಇವರಿಗೆ ವೇತನ ನೀಡಲು ಹೆಚ್ ಆರ್ ಎಂಎಸ್ ಎನ್ನುವ ವ್ಯವಸ್ಥೆಯಿದೆ. ಅದರಲ್ಲಿ ಪ್ರತಿ ಶಿಕ್ಷಕರಿಗೆ ಕೋಡ್ ಸಂಖ್ಯೆಯನ್ನು ನೀಡಲಾಗುತ್ತದೆ. ಅದಕ್ಕೆ ಸರಿಯಾಗಿ ವೇತನ ಶಿಕ್ಷಕರ ಖಾತೆಗೆ ವರ್ಗಾವಣೆಯಾಗುತ್ತದೆ. ಈ ಕೋಡ್ ಸಂಖ್ಯೆಯನ್ನು ಖಜಾನೆ-2ರಲ್ಲಿ ತಪ್ಪಾಗಿ ಬಳಸಿದ್ದರಿಂದ ತಾಂತ್ರಿಕ ದೋಷ ಕಂಡುಬಂದು ವೇತನ ಬಿಡುಗಡೆ ವಿಳಂಬವಾಗಿದೆ ಎನ್ನುತ್ತಾರೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


