ತುಮಕೂರು: ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಭೀಕರ ಅಪಘಾತ, ಇಬ್ಬರು ಸಾವು
ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನಿಬ್ಬರು ಗಂಬೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಶಿರಾ ಬಳಿ ನಡೆದಿದೆ.

Published On :
ತುಮಕೂರು: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನಿಬ್ಬರು ಗಂಬೀರ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಶಿರಾ ಬಳಿ ನಡೆದಿದೆ.
ಕ್ಯಾಂಟರ್ ಚಾಲಕ ರಮೇಶ್ (45) ಹಾಗು ರೈತ ಶ್ರೀಕಾಂತ್ (45) ಮೃತರಾಗಿದ್ದು ರಾಷ್ಟ್ರೀಯ ಹೆದ್ದಾರಿ 48ರ ಮಾನಂಗಿ ಗೇಟ್ ಬಳಿ ಬರುತ್ತಿದ್ದಾಗ ಅವಘಡ ಸಂಭವಿಸಿದೆ.
ಬೆಳಗಿನ ಜಾವ ನಡೆದ ಅಪಘಾತದಲ್ಲಿ ಕ್ಯಾಂಟರ್ ಲಾರಿ ನುಜ್ಜುಗುಜ್ಜಾಗಿದೆ. ರೈತರಾದ ಶ್ರೀಕಾಂತ್ ತಾವು ಬೆಳೆದ ಈರುಳ್ಳಿಯನ್ನು ಕ್ಯಾಂಟರ್ ಒಂದನ್ನು ಬಾಡಿಗೆಗೆ ಪಡೆದು ಬೆಂಗಳೂರು ಮಾರುಕಟ್ಟೆಗೆ ಮಾರಾಟಕ್ಕಾಗಿ ತರುತ್ತಿದ್ದರು.
ಇದೇ ವೇಳೆ ಲಾರಿ ಕ್ಲೀನರ್ ಮತ್ತು ಇನ್ನೋರ್ವ ವ್ಯಕ್ತಿ ಗಂಬಿರವಾಗಿ ಗಾಯಗೊಂಡ್ದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶಿರಾ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


