ಸಾರ್ವಜನಿಕ ಅರ್ಜಿಗಳನ್ನು ಬೇಗ ವಿಲೇವಾರಿ ಮಾಡದಿದ್ದರೇ ಕೆಲಸದಿಂದ ವಜಾ: ಕಂದಾಯ ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ
ಸಾಧ್ಯವಾದಷ್ಟು ಬೇಗ ಜನರ ಕಷ್ಟಗಳಿಗೆ ಸ್ಪಂದಿಸಿ. ಬೇಜವಾಬ್ದಾರಿ ವರ್ತನೆ ತೋರಿ ನನ್ನನ್ನು ಕೆಟ್ಟವನನ್ನಾಗಿ ಮಾಡಬೇಡಿ ಎಂದು ಕಂದಾಯ ಅಧಿಕಾರಿಗಳಿಗೆ ....

Published On :
ಬೆಂಗಳೂರು: ಸಾಧ್ಯವಾದಷ್ಟು ಬೇಗ ಜನರ ಕಷ್ಟಗಳಿಗೆ ಸ್ಪಂದಿಸಿ. ಬೇಜವಾಬ್ದಾರಿ ವರ್ತನೆ ತೋರಿ ನನ್ನನ್ನು ಕೆಟ್ಟವನನ್ನಾಗಿ ಮಾಡಬೇಡಿ ಎಂದು ಕಂದಾಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಎಚ್ಚರಿಕೆ ನೀಡಿದ್ದಾರೆ,
ರಾಮನಗರದಲ್ಲಿ ಮಾತನಾಡಿದ ಅವರು, ರಾಮನಗರ ಕ್ಷೇತ್ರದ ಜನ ಅರ್ಜಿ ಹಿಡಿದುಕೊಂಡು ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಬಂದರೇ ಅವರ ಕಷ್ಟಗಳಿಗೆ ಸ್ಪಂದಿಸಿ, ಇಲ್ಲವಾದರೇ ನಿಮ್ಮನ್ನು ಅಮಾನತುಗೊಳಿಸಲಾಗುವುದು, ಆ ಮಟ್ಟಕ್ಕೆ ನನ್ನನ್ನು ತಳ್ಳಬೇಡಿ ಎಂದು ಹೇಳಿದ್ದಾರೆ.
ಜನ ನಿಮ್ಮ ಬಳಿ ಸಮಸ್ಯೆ ಹೇಳಿಕೊಂಡು ಬಂದಾಗ ಒಂದು ವಾರ, 10 ದಿನ ಇಲ್ಲವೇ 1 ತಿಂಗಳು ಸಮಯ ತೆಗೆದುಕೊಳ್ಳಿ, ಆದರೆ ಕೆಲಸ ಮುಗಿಸಿಕೊಡಿ ಎಂದು ಹೇಳಿದ್ದಾರೆ,
ರಾಮನಗರದ ಕ್ಷೇತ್ರದ ಜನತೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೇ ನಾನು ಕೆಟ್ಟವನಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


