ಬಿಡಿಎ ಫ್ಲ್ಯಾಟ್ ಖರೀದಿದಾರರಿಗೆ ಬಂಪರ್ ಆಫರ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಮೈಸೂರು ರಸ್ತೆಯ ಕೊಮ್ಮಘಟ್ಟ ಮತ್ತು ಕಣಮಿಣಿಕೆಯಲ್ಲಿ ನಿರ್ಮಿಸಿರುವ...

Published On :
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಮೈಸೂರು ರಸ್ತೆಯ ಕೊಮ್ಮಘಟ್ಟ ಮತ್ತು ಕಣಮಿಣಿಕೆಯಲ್ಲಿ ನಿರ್ಮಿಸಿರುವ ಅಪಾರ್ಟ್ ಮೆಂಟ್ ಗಳಲ್ಲಿ ಫ್ಲ್ಯಾಟ್ ಖರೀದಿಗೆ ಬಿಡಿಎ ಆಫರ್ ಪ್ರಕಟಿಸಿದೆ.
ಇಂದು ಬಿಡಿಎ ಆಡಳಿತ ಮಂಡಳಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಡಿಎ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ ಅವರು, ಮೈಸೂರು ರಸ್ತೆಯಲ್ಲಿರುವ ಸಮುಚ್ಚಯಗಳಲ್ಲಿ ಒಂದು ಫ್ಲ್ಯಾಟ್ ಖರೀದಿಸುವವರಿಗೆ ಶೇ.5ರಷ್ಟು ಹಾಗೂ 10 ಹಾಗೂ ಅದಕ್ಕಿಂತ ಹೆಚ್ಚು ಫ್ಲ್ಯಾಟ್ ಖರೀದಿಸುವವರಿಗೆ ಶೇ.10ರಷ್ಟು ರಿಯಾಯಿತಿ ನೀಡಲು ನಿರ್ಧರಿಸಲಾಗಿದೆ ಎಂದರು.
ಆಫರ್ ನೀಡುವುದರಿಂದ ಶೀಘ್ರವೇ ಅಪಾರ್ಟ್ ಮೆಂಟ್ ಖರೀದಿಯಾದರೆ ಮುಂದಿನ ಪ್ರಾಜೆಕ್ಟ್ ಕೈಗೊಳ್ಳಲು ಸಾಧ್ಯ. ಹೀಗಾಗಿ ರಿಯಾಯಿತಿ ಘೋಷಿಸಿದ್ದೇವೆ ಎಂದರು.
ಹೆಸರಘಟ್ಟ ರಸ್ತೆ ಬಳಿಯ ಡಾ.ಶಿವರಾಂ ಕಾರಂತರ ಬಡಾವಣೆ 17 ಗ್ರಾಮಗಳಲ್ಲಿ 3564 ಎಕರೆ ಜಮೀನು ಸ್ವಾಧೀನ ಮಾಡಿ, ಸಾರ್ವಜನಿಕರಿಗೆ ನಿವೇಶನ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಪ್ರಕರಣ ಕುರಿತು ಸುಪ್ರೀಂಕೋರ್ಟ್ ಮೂರು ತಿಂಗಳೊಳಗೆ ನೋಟಿಫೈ ಮಾಡಲು ಆದೇಶ ನೀಡಿತ್ತು. ಅಂತೆಯೇ, ನಿವೇಶ ಹಂಚಿಕೆ ಸಂಬಂಧ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಿ, ಸಚಿವ ಸಂಪುಟದಿಂದ ಒಪ್ಪಿಗೆ ಪಡೆದುಕೊಳ್ಳಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


