ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆ: ಖಂಡ್ರೆ ರಾಜಿ ಸೂತ್ರ; ಲಕ್ಷ್ಮಿ ಹೆಬ್ಬಾಳ್ಕರ್ ಬಣಕ್ಕೆ ಗೆಲುವು
ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ಬೆಳಗಾವಿ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಬಣ ...

Published On :
ಬೆಳಗಾವಿ: ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಬಣ ಅವಿರೋಧವಾಗಿ ಆಯ್ಕೆಯಾಗಿದೆ.
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣದ ಅಧ್ಯಕ್ಷರಾಗಿ ಮಹಾದೇವ್ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬು ಸಾಹೇಬ್ ಜಮಾದಾರ್ ಆಯ್ಕೆಯಾಗಿದ್ದಾರೆ.
ಬೆಳಗಾವಿ ಪಿಎಲ್‌ಡಿ ಬ್ಯಾಂಕ್ಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅದರಂತೆ ಬೆಳಗ್ಗೆ 10 ರಿಂದ 11 ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಬಣದವರಷ್ಟೇ ನಾಮಪತ್ರ ಸಲ್ಲಿಸಿದ್ದರು.
ಪ್ರತಿಷ್ಠೆಯ ಕಣವಾಗಿದ್ದ ಪಿಎಲ್‌ಡಿ ಬ್ಯಾಂಕ್ಗೆ ಹಿಂದಿನಿಂದಲೂ ಜಾರಕಿಹೊಳಿ ಬಣದವರೇ ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು. ಆದರೆ ಈ ಬಾರಿ ಲಕ್ಷ್ಮೀ ಹೆಬ್ಬಾಳ್ಕರ್ ಬಣದವರು ಅವಿರೋಧ ಆಯ್ಕೆಯಾಗಿದ್ದಾರೆ.
ಬೆಳಗಾವಿ ಸಕ್ಕರೆ ಉದ್ಯಮ ಮತ್ತು ಸಹಕಾರ ಕ್ಷೇತ್ರದ ಮೇಲೆ ಜಾರಕಿಹೊಳಿ ಸಹೋದರರು ಪ್ರಬಲ ಹಿಡಿತ ಹೊಂದಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಂಧಾನದ ಬಳಿಕ ಜಾರಕಿಹೊಳಿ ಬಣದವರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ನಡೆಯಿತು. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮೇಲುಗೈ ಸಾಧಿಸುವ ಮೂಲಕ ಜಾರಕಿಹೊಳಿ ಸಹೋದರರ ಅಬ್ಬರಕ್ಕೆ ಬ್ರೇಕ್ ಬಿದ್ದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Belagaviಬೆಳಗಾವಿwonಗೆಲುವುಲಕ್ಷ್ಮಿ ಹೆಬ್ಬಾಳ್ಕರ್PLD Bank electionಪಿಎಲ್ ಡಿ ಬ್ಯಾಂಕ್ ಚುನಾವಣೆJarkiholi Brothers-Hebbalkar
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


