ಸಿದ್ದರಾಮಯ್ಯ ಬಳಿಕ ಉಪ ಮುಖ್ಯಮಂತ್ರಿ ಪರಮೇಶ್ವರ್ ವಿದೇಶ ಪ್ರವಾಸ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಸಚಿವರ ಬಳಿಕ ಇದೀಗ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ವಿದೇಶ ಪ್ರಯಾಣ ಬೆಳಸಲಿದ್ದಾರೆಂದು ಶನಿವಾರ ತಿಳಿದುಬಂದಿದೆ...

Published On :
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಸಚಿವರ ಬಳಿಕ ಇದೀಗ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ವಿದೇಶ ಪ್ರಯಾಣ ಬೆಳಸಲಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಸೆ.11ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆಯಲಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಸಲುವಾಗಿ ಪರಮೇಶ್ವರ್ ಅವರು ಪ್ರಯಾಣ ಬೆಳೆಸಲಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಸೆ.10 ರಿಂದ ನಡೆಯಲಿರುವ ಜಾಗತಿಕ ಹವಾಮಾನ ಶೃಂಗಕ್ಕಾಗಿ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದೇನೆ. ಬದಲಾಗುತ್ತಿರುವ ಮಾಲಿನ್ಯದ ಕುರಿತು ಕೆಲ ವಿಭಾಗದಲ್ಲಿ ವಿಚಾರ ಮಂಡನೆ ಮಾಡಲಿದ್ದೇನೆ. ವಿಶ್ವರ ಇದರೆ ದೇಶದ ರಾಜಕೀಯ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಅದೇ ರೀತಿ ನನಗೂ ಆಹ್ವಾನ ಬಂದಿದೆ. ಹೀಗಾಗಿ ಇದನ್ನು ರಾಜಕೀಯವಾಗಿ ವಿಶ್ಲೇಷಣೆ ಮಾಡಬೇಕಿಲ್ಲ ಎಂದು ಹೇಳಿದರು.
ಇತ್ತೀಚೆಗಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶ ಪ್ರವಾಸಕ್ಕೆ ಸೆರಳಿದ್ದು ಸೆ.15ರಂದು ಬೆಂಗಳೂರಿಗೆ ವಾಪಸಾಗಲಿದ್ದಾರೆ. ಜೊತೆಗೆ ಸಚಿವಾರದ ಆರ್.ವಿ.ದೇಶಪಾಂಡೆ, ಶಿವಶಂಕರರೆಡ್ಡಿಯವರೂ ವಿದೇಶ ಪ್ರವಾಸದಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕಸ್ಯಾನ್ ಫ್ರಾನ್ಸಿಸ್ಕೋsummitSan FranciscoParameshwaraಪರಮೇಶ್ವರಶೃಂಗಸಭೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


