ಡ್ರೋನ್ ಕ್ಯಾಮರಾ ಸಹಾಯದಿಂದ 8 ಲಕ್ಷ ಮೌಲ್ಯದ ಗಾಂಜಾ ಪತ್ತೆ !
ವಿಜಯಪುರದ ಹೆಬ್ಬಲಟ್ಟಿ ಗ್ರಾಮದಲ್ಲಿ ಬೆಳೆದಿದ್ದ ಸುಮಾರು 8 ಲಕ್ಷ ಮೌಲ್ಯದ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಡ್ರೋನ್ ಕ್ಯಾಮರಾಗಳ ಸಹಾಯದಿಂದ ಪತ್ತೆ ಹಚ್ಚಿದ್ದಾರೆ.

ವಿಜಯಪುರ: ವಿಜಯಪುರದ ಹೆಬ್ಬಲಟ್ಟಿ ಗ್ರಾಮದಲ್ಲಿ ಬೆಳೆದಿದ್ದ ಸುಮಾರು 8 ಲಕ್ಷ ಮೌಲ್ಯದ ಗಾಂಜಾವನ್ನು ಅಬಕಾರಿ ಅಧಿಕಾರಿಗಳು ಡ್ರೋನ್ ಕ್ಯಾಮರಾಗಳ ಸಹಾಯದಿಂದ ಪತ್ತೆ ಹಚ್ಚಿದ್ದಾರೆ.
ನಿಂಬೆಹಣ್ಣು, ಬಾಳೆಗಿಡ ಮಧ್ಯ ಬೆಳೆಯಲಾಗಿದ್ದ 101 ಕೆಜಿ ಗಾಂಜಾವನ್ನು ಪತ್ತೆ ಹಚ್ಚಲಾಗಿದೆ. ಗಾಂಜಾ ಬೆಳೆದಿದ್ದ ಆರೋಪಿ ಎಸ್. ಕೆ. ಗುರಪ್ಪ ಎಂಬವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ.
ಈ ವರ್ಷದ ಆರಂಭದಲ್ಲಿ ಕೆಲವರ ಜಮೀನಿನಲ್ಲೂ ಬೆಳೆಯಲಾಗಿದ್ದ ಗಾಂಜಾವನ್ನು ಇದೇ ರೀತಿಯಲ್ಲಿ ಪತ್ತೆ ಹಚ್ಚಲಾಗಿತ್ತು. ದಾಳಿ ಸಂದರ್ಭದಲ್ಲಿ ಸಮಯ ಉಳಿತಾಯದ ಜೊತೆಗೆ ಸೂಕ್ತ ಸಾಕ್ಷ್ಯಗಳಿಗೆ ಈ ತಂತ್ರಜ್ಞಾನ ನೆರವಾಗುವುದರಿಂದ ಅಬಕಾರಿ ಇಲಾಖೆ ಉಪ ಆಯುಕ್ತ ಎ. ರವಿಶಂಕರ್ ಜಿಲ್ಲೆಗೆ ಡ್ರೋನ್ ಕ್ಯಾಮರಾಗಳು ಬೇಕೆಂದು ಉನ್ನತ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು.
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ರವಿಶಂಕರ್, ಈ ಭಾಗದ ರೈತರು ನಿಂಬೆ, ಬಾಳೆಗಿಡ, ಹತ್ತಿ ಬೆಳೆಯ ಮಧ್ಯೆ ಗಾಂಜಾ ಬೆಳೆಯುತ್ತಿದ್ದರಿಂದ ಅದನ್ನು ಪತ್ತೆ ಹಚ್ಚಲು ಕಷ್ಟಕರವಾಗಿತ್ತು. ಅಕ್ರಮವಾಗಿ ಬೆಳೆಯುತ್ತಿದ್ದ ಗಾಂಜಾ ಪತ್ತೆ ಹಚ್ಚಲು ಡ್ರೋನ್ ಕ್ಯಾಮರಾಗಳು ಸಹಾಯವಾಗಿವೆ ಎಂದು ಹೇಳಿದರು.
ಬಗರ್ ಹುಕುಂ ಜಮೀನಿನಲ್ಲಿ ಗಾಂಜಾ ಬೆಳೆ ಕಂಡುಬಂದಲ್ಲಿ ರೈತರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಉನ್ನತ ಅಧಿಕಾರಿಗಳು ಡ್ರೋನ್ ಕ್ಯಾಮರಾಗಳನ್ನು ನೀಡಿದ್ದರೆ ಅದರ ಬಗ್ಗೆ ಇಲಾಖೆ ವತಿಯಿಂದ ತರಬೇತಿ ನೀಡಲಾಗುವುದು ಎಂದು ರವಿಕುಮಾರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


