ಮಡಿಕೇರಿ: ಗಣೇಶ ವಿಸರ್ಜನೆ ವೇಳೆ ಕೆರೆಗೆ ಬಿದ್ದು ಬಾಲಕ ದುರ್ಮರಣ
ಗಣೇಶ ವಿಸರ್ಜನ್ಗೆ ತೆರಳಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆ ಕುಶಾನನಗರದಲ್ಲಿ ನಡೆದಿದೆ.

Published On :
ಮಡಿಕೇರಿ: ಗಣೇಶ ವಿಸರ್ಜನ್ಗೆ ತೆರಳಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಡಿಕೇರಿ ಜಿಲ್ಲೆ ಕುಶಾನನಗರದಲ್ಲಿ ನಡೆದಿದೆ.
ಕುಶಾಲನಗರದ ಸಿದ್ಧಲಿಂಗಪುರದ ಅರಶಿನಕುಪ್ಪೆಯಲ್ಲಿ ನಡೆದ ಘಟನೆಯಲ್ಲಿ ಹೇಮಂತ್ (13) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಸಿದ್ದಲಿಂಗಪುರ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿದ್ದ ಹೇಮಂತ್ ಸ್ಥಳೀಯ ನಿವಾಸಿಯಾದ ಅನಂತಕುಮಾರ್ ಹಾಗೂ ಪದ್ಮ ದಂಪತಿಯ ಪುತ್ರ್.
ಗುರುವಾರ ಮಧ್ಯಾಹ್ನ 12 ಬಾಲಕರ ಗುಂಪು ಗಣೇಶ ವಿಸರ್ಜನೆಗಾಗಿ ಕೆರೆಗೆ ತೆರಳಿದ್ದಾರೆ. ಈ ವೇಳೆ ಹೇಮಂತ್ ನೀರಲ್ಲಿ ಮುಳುಗಿದ್ದಾನೆ. ಸ್ಥಳದಲ್ಲಿದ್ದ ಉಳಿದವರಾರಿಗೂ ಈಜು ಬರದ ಕಾರಣ ಯಾರೂ ರಕ್ಷಣೆಗೆ ಮುಂದಾಗಿರಲಿಲ್ಲ ಎಂದು ಸ್ಥಳೀಯರು ವಿವರಿಸಿದರು.
ಘಟನೆ ಕುರಿತು ಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
madikeriಮಡಿಕೇರಿboy drowned in lakeGanesha idol Visarjana Poojaನೀರಲ್ಲಿ ಮುಳುಗಿದ ಬಾಲಕಗಣೇಶ ವಿಗ್ರಹ ವಿಸರ್ಜನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


