ರಾಜ್ಯ

ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಯೋಗ, ಏರೋಬಿಕ್ಸ್ ತರಗತಿಗಳು

ಇನ್ನು ಮುಂದೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ಮಕ್ಕಳಿಗೆ ಪ್ರತಿದಿನ ...

ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಯೋಗ, ಏರೋಬಿಕ್ಸ್ ತರಗತಿಗಳು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಇನ್ನು ಮುಂದೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ಮಕ್ಕಳಿಗೆ ಪ್ರತಿದಿನ ಬೆಳಗ್ಗೆ ಯೋಗ ಮತ್ತು ಏರೋಬಿಕ್ಸ್ ಹೇಳಿಕೊಡಲಾಗುತ್ತದೆ.

ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಆರೋಗ್ಯವಾಗಿ ಶಾರೀರಿಕವಾಗಿ ಸದೃಢವಾಗಿರಲು ರಾಜ್ಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಇಲಾಖೆ ಬೆಳಗಿನ ಹೊತ್ತು ತರಗತಿಗಳು ಆರಂಭವಾಗುವುದಕ್ಕೆ ಮುನ್ನ 15 ನಿಮಿಷಗಳ ಕಾಲ ಯೋಗ ಮತ್ತು ಏರೋಬಿಕ್ಸ್ ನಡೆಸಲು ತೀರ್ಮಾನಿಸಿದ್ದು ಸದ್ಯದಲ್ಲಿಯೇ ಕಾರ್ಯವಿಧಾನಗಳು ಅಂತಿಮಗೊಳಿಸಲಿದೆ.

ಈ ವಿಷಯವನ್ನು ಖಚಿತಪಡಿಸಿದ ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಣ ಸಚಿವ ಎನ್ ಮಹೇಶ್, ಶಾಲೆಗಳಲ್ಲಿ ಮಕ್ಕಳನ್ನು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಮಾಡಲು ಮತ್ತು ಆರೋಗ್ಯವಾಗಿರಲು ಯೋಗ ಮತ್ತು ಏರೋಬಿಕ್ಸ್ ನ್ನು ಶಾಲೆಗಳಲ್ಲಿ ಪ್ರತಿದಿನ ಹೇಳಿಕೊಡುವುದನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.

ಈ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು ಅಧಿಕೃತ ಆದೇಶ ಸದ್ಯದಲ್ಲಿಯೇ ಹೊರಡಿಸಲಾಗುವುದು. ಶಾಲೆಗಳಲ್ಲಿ ಸದ್ಯದಲ್ಲಿಯೇ ಯೋಗ ಮತ್ತು ಏರೋಬಿಕ್ಸ್ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ಯೋಗ ಮತ್ತು ಏರೋಬಿಕ್ಸ್ ಶಿಕ್ಷಣದ ಜೊತೆಗೆ ಮಕ್ಕಳಿಗೆ ನೃತ್ಯ ತರಗತಿಗಳನ್ನು ಕೂಡ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.