ದೇವೇಗೌಡ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ: ತನಿಖೆಗೆ ಒತ್ತಾಯಿಸಿದ ಬಿಜೆಪಿ
ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಮತ್ತು ಅವರ ಕುಟುಂಬ ಭೂ ಕಬಳಿಕೆ ಮಾಡಿದ್ದಾರೆ ಎಂದು ...

ಬೆಂಗಳೂರು: ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಮತ್ತು ಅವರ ಕುಟುಂಬ ಭೂ ಕಬಳಿಕೆ ಮಾಡಿದ್ದಾರೆ ಎಂದು ಕೇಳಿಬರುತ್ತಿರುವ ಆರೋಪದ ಬಗ್ಗೆ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಬೇಕೆಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ.
ಈ ವಿಷಯದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ತಮ್ಮ ನಿಲುವನ್ನು ಸ್ಪಷ್ಟಪಡಿಸಬೇಕು ಮತ್ತು ಸರ್ಕಾರ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಬೇಕೆಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ನ್ ರವಿಕುಮಾರ್ ಆಗ್ರಹಿಸಿದ್ದಾರೆ.
ಹಾಸನ ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಗೌರಿಪುರ ಎಂಬಲ್ಲಿ ಸುಮಾರು 54.23 ಎಕರೆ ಜಮೀನನ್ನು ಸಚಿವ ರೇವಣ್ಣ ಅವರ ಪುತ್ರ ಪ್ರಜ್ವಲ್ ಮತ್ತು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರ ಅತ್ತೆ ಕಾಳಮ್ಮ ಹೆಸರಿನಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ನಿನ್ನೆ ಸಚಿವ ಎ ಮಂಜು ಆರೋಪಿಸಿದ್ದರು.
ಭೂಮಿಯನ್ನು ಒತ್ತುವರಿ ಮಾಡಿಕೊಳ್ಳಲು ಬಳಸಿದ ವಿಧಾನಗಳ ಬಗ್ಗೆ ಪ್ರತಿಕ್ರಿಯಿಸಿದ ರವಿಕುಮಾರ್, ತಮ್ಮ ಇಚ್ಛೆಯ ದರದಲ್ಲಿ ಮೂರನೇ ವ್ಯಕ್ತಿ ಹೆಸರಿನಲ್ಲಿ ಭೂಮಿಯನ್ನು ಖರೀದಿಸಲಾಗಿದ್ದು ನಂತರ ಅದನ್ನು ಕಾಳಮ್ಮ ಮತ್ತು ಪ್ರಜ್ವಲ್ ರೇವಣ್ಣ ಹೆಸರಿಗೆ ವರ್ಗಾಯಿಸಲಾಗಿದೆ. ಈ ಮೂಲಕ ಅಧಿಕಾರದಲ್ಲಿರುವವರು ಯಾವ ರೀತಿ ಭೂಮಿಯನ್ನು ಅತಿಕ್ರಮಣ ಮಾಡಿಕೊಳ್ಳಬಹುದು ಎಂದು ತೋರಿಸಿಕೊಟ್ಟಿದ್ದಾರೆ ಎಂದು ಟೀಕಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


