ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ನವದಂಪತಿ ನೇಣಿಗೆ ಶರಣು!
ಪ್ರೀತಿಸಿ ಮದುವೆಯಾಗಿದ್ದ ನವಜೋಡಿಯೊಂದು ಡೆತ್ ನೊಟ್ ಬರೆದಿಟ್ಟು ಒಂದೇ ನೇಣು ಕುಣಿಕೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

Published On :
ಮಂಡ್ಯ: ಪ್ರೀತಿಸಿ ಮದುವೆಯಾಗಿದ್ದ ನವಜೋಡಿಯೊಂದು ಡೆತ್ ನೊಟ್ ಬರೆದಿಟ್ಟು ಒಂದೇ ನೇಣು ಕುಣಿಕೆಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯದ ಮಳವಳ್ಳಿ ಸಮೀಪ ಅಂಚೆದೊಡ್ಡಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಅಶ್ವಿನಿ(21), ನವೀನ್(25) ಎನ್ನುವ ದಂಪತಿಗಳು ಸಾವಿಗೆ ಶರಣಾಗಿದ್ದಾರೆ.
ಮೂಲತಃ ಮಂಡ್ಯದ ಹೆಬ್ಬಕವಾಡಿ ಗ್ರಾಮದವರಾಗಿದ್ದ ಈ ಇಬ್ಬರೂ ಕಳೆದ ಇಪ್ಪತ್ತು ದಿನಗಳ ಹಿಂದಷ್ಟೇ ವಿವಾಹವಾಗಿದರು.ಮೂರು ದಿನಗಳ ಹಿಂದೆ ತಮ್ಮ ಸ್ವಗ್ರಾಮದಿಂದ ಅಜ್ಜಿ ಮನೆ ಇದ್ದ ಅಂಚೆದೊಡ್ಡಿ ಗ್ರಾಮಕ್ಕೆ ಬಂದಿದ್ದ ಈ ಜೋಡಿ ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದೆ.
ಸಾವಿಗೆ ಮುನ್ನ ಬರೆದ ಡೆತ್ ನೊಟ್ ನಲ್ಲಿ "ನಮ್ಮ ಸಾವಿಗೆ ಯಾರೂ ಕಾರಣವಲ್ಲ, ನಮ್ಮ ಆಸೆಯಂತೆಯೇ ನಾವು ಸಾವನ್ನಪ್ಪುತ್ತಿದ್ದೇವೆ." ಎಂದು ಬರೆಯಲಾಗಿದೆ.
ದಂಪತಿಗಳ ಸಾವಿಗೆ ನಿಖರ ಕಾರಣ ತಿಳಿದಿಲ್ಲ.ಘಟನೆ ಕುರಿತಂತೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


