ಸೆ.24ರೊಳಗೆ ಬೆಂಗಳೂರನ್ನು ಗುಂಡಿ ಮುಕ್ತ ನಗರವಾಗಿಸಿ: ಬಿಬಿಎಂಪಿಗೆ 'ಹೈ' ಸೂಚನೆ
ಸೆ.24ರೊಳಗಾಗಿ ಬೆಂಗಳೂರನ್ನು ಗುಂಡಿ ಮುಕ್ತ ನಗರವಾಗಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ...

Published On :
ಬೆಂಗಳೂರು: ಸೆ.24ರೊಳಗಾಗಿ ಬೆಂಗಳೂರನ್ನು ಗುಂಡಿ ಮುಕ್ತ ನಗರವಾಗಿಸುವಂತೆ ಬಿಬಿಎಂಪಿಗೆ ಹೈಕೋರ್ಟ್ ಗುರುವಾರ ಸೂಚನೆ ನೀಡಿದೆ.
ವಿಚಾರಣೆ ವೇಳೆ ನಗರ 8 ಪ್ರದೇಶಗಳಲ್ಲಿ 898 ಗುಂಡಿಗಳನ್ನು ಮುಚ್ಚಲಾಗಿದೆ. ಇನ್ನುಳಿದ 2,172 ಗುಂಡಿಗಲನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಬಿಬಿಎಂಪಿ ಪರ ವಕೀಲರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.
ಈ ವೇಳೆ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್'ಜಿ ಪಂಡಿತ್ ಅವರಿದ್ದ ಪೀಠ ಪ್ರತಿಕ್ರಿಯೆ ನೀಡಿ, ಸೆ.24ರೊಳಗಾಗಿ ನಗರವನ್ನು ಗುಂಡಿ ಮುಕ್ತ ನಗರವಾಗಿಸುವಂತೆ ಆದೇಶಿಸಿದ್ದಾರೆ.
ನಿನ್ನೆ ನಡೆದ ವಿಚಾರಣೆ ವೇಳೆ ಬಿಬಿಎಂಪಿಗೆ ನ್ಯಾಯಾಲಯ ಮೌಖಿಕವಾಗಿ ಆದೇಶ ನೀಡಿ, ಗುರುವಾರದೊಳಗಾಗಿ ಎಲ್ಲಾ ಗುಂಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿತ್ತು. ಈ ಕುರಿತಂತೆ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದ ಬಿಬಿಎಂಪಿ ಗುಂಡಿಗಳನ್ನು ಮುಚ್ಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


