ಕೊಡಗು ಪ್ರವಾಹ: ಸಿಎಂ ಪರಿಹಾರ ನಿಧಿಯಿಂದ ನಿರಾಶ್ರಿತ ಕುಟುಂಬಗಳಿಗೆ ರೂ.50,000 ಪರಿಹಾರ
ಪ್ರವಾಹ ಹಾಗೂ ಭೂಕುಸಿತದಿಂದಾಗಿ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಕೊಡಗಿನ ನಿರಾಶ್ರಿತ ಕುಟುಂಬಗಳಿಗೆ ರೂ.50 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ...

Published On :
ಬೆಂಗಳೂರು: ಪ್ರವಾಹ ಹಾಗೂ ಭೂಕುಸಿತದಿಂದಾಗಿ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಕೊಡಗಿನ ನಿರಾಶ್ರಿತ ಕುಟುಂಬಗಳಿಗೆ ರೂ.50 ಸಾವಿರ ಪರಿಹಾರ ನೀಡಲು ರಾಜ್ಯ ಸರ್ಕಾರ ಶುಕ್ರವಾರ ನಿರ್ಧರಿಸಿದೆ.
ಕಳೆದ ಆಗಸ್ಟ್ ತಿಂಗಳಿನಲ್ಲಿ ಸಾವಿನ ಮಳೆ ಹಾಗೂ ಭೀಕರ ಪ್ರವಾಹ ಸೃಷ್ಟಿಯಾದ ಹಿನ್ನಲೆಯಲ್ಲಿ ಕೊಡಗು ಜಿಲ್ಲೆ ಸಂಪೂರ್ಣವಾಗಿ ನಾಶಗೊಂಡಿದೆ. ಪ್ರವಾಹದ ಪರಿಣಾಮ ಸಾಕಷ್ಟು ಮಂದಿ ಆಸ್ತಿಪಾಸ್ತಿಗಳನ್ನು ಕಳೆದುಕೊಂಡಿದ್ದಾರೆ.
ಪ್ರವಾಹ ಪೀಡಿತ ಕೊಡಗು ಜಿಲ್ಲೆಗಾಗಿ ರಾಜ್ಯದ ಜನತೆ ಮಿಡಿದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾಕಷ್ಟು ಸಹಾಯ ಧನವನ್ನು ನೀಡಿದ್ದು, ಇದೀಗ ಸಿಎಂ ಪರಿಹಾರ ನಿಧಿಯಲ್ಲಿ ಸಾಕಷ್ಟು ಮೊತ್ತ ಸಂಗ್ರಹವಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಧನ ಸಹಾಯ ಮಾಡಲು ಸರ್ಕಾರ ಮುಂದಾಗಿದೆ.
ಇದರಂತೆ ಕೊಡಗಿನ 1500 ಕುಟುಂಬಗಳಿಗೆ ಪರಿಹಾರ ನೀಡಲು ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಹಣಕಾಸು ಇಲಾಖೆ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಸಚಿವ ಸಂಪುಟ ಸಭೆಯಲ್ಲಿಯೂ ಪರಿಹಾರ ಧನ ವಿತರಿಸುವ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


