ನಾಡಪ್ರಭು ಕೆಂಪೇಗೌಡ ಬಡಾವಣೆ :ಮಂಗಳವಾರ ಐದು ಸಾವಿರ ನಿವೇಶನಗಳ ಹಂಚಿಕೆ !
ಬಿಡಿಎ ಅಭಿವೃದ್ದಿಪಡಿಸಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯ 5 ಸಾವಿರ ನಿವೇಶನಗಳ ಹಂಚಿಕೆಯನ್ನು ಮಂಗಳವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆರಂಭಿಸಲಿದ್ದಾರೆ.

ಬೆಂಗಳೂರು: ಬಿಡಿಎ ಅಭಿವೃದ್ದಿಪಡಿಸಿರುವ ನಾಡಪ್ರಭು ಕೆಂಪೇಗೌಡ ಬಡಾವಣೆಯ 5 ಸಾವಿರ ನಿವೇಶನಗಳ ಹಂಚಿಕೆಯನ್ನು ಮಂಗಳವಾರ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಆರಂಭಿಸಲಿದ್ದಾರೆ.
ಇದು ಎರಡನೇ ಹಂತದ ಹಂಚಿಕೆಯಾಗಿದ್ದು, ಗಣಕೀಕೃತ ಯಾದೃಚ್ಚೀಕರಣ ಮಾದರಿಯನ್ನು ಸೈಟ್ ಹಂಚಿಕೆಯಲ್ಲಿ ಅನುಸರಿಸಲಾಗುತ್ತದೆ ಎಂದು ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ.
ಇದೇ 25 ರಂದು ಮಂಗಳವಾರ ಮುಖ್ಯಮಂತ್ರಿಗ ಗೃಹ ಕಚೇರಿ ಕೃಷ್ಣಾದಲ್ಲಿ ನಿವೇಶನಗಳ ಹಂಚಿಕೆ ಪ್ರಕ್ರಿಯೆ ನಡೆಯಲಿದೆ. ನಂತರ ನಿವೇಶನ ಪಡೆದ ಪಲಾನುಭವಿಗಳ ಹೆಸರನ್ನು ಬಿಡಿಎ ಅಧಿಕೃತ ಜಾಲತಾಣ bdabangalore.org ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


