ರಸ್ತೆ ಗುಂಡಿ ಮುಚ್ಚಲು 'ಹೈ' ಗಡುವು: ರಜಾ ದಿನವೂ ಗುಂಡಿಗೆ ಬಿಬಿಎಂಪಿ ತೇಪೆ
ರಸ್ತೆ ಗುಂಡಿ ವಿಚಾರದಲ್ಲಿ ಹೈಕೋರ್ಟ್ ಹಾಕಿದ ಛೀ ಮಾರಿಯಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಎನ್ನದೇ ರಸ್ತೆ ಗುಂಡಿ ಮುಚ್ಚಿರುವ ಕಾರ್ಯದಲ್ಲಿ ತೊಡಗಿದ್ದಾರೆ...

Published On :
ಬೆಂಗಳೂರು: ರಸ್ತೆ ಗುಂಡಿ ವಿಚಾರದಲ್ಲಿ ಹೈಕೋರ್ಟ್ ಹಾಕಿದ ಛೀ ಮಾರಿಯಿಂದ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಎನ್ನದೇ ರಸ್ತೆ ಗುಂಡಿ ಮುಚ್ಚಿರುವ ಕಾರ್ಯದಲ್ಲಿ ತೊಡಗಿದ್ದಾರೆ.
1.655 ಗುಂಡಿಗಳ ಪೈಕಿ ಶುಕ್ರವಾರ ಒಂದೇ ದಿನ ರಾತ್ರಿ 7.30ರವರೆಗೆ 517 ಗುಂಡಿಗಳನ್ನು ಮುಚ್ಚಲಾಗಿದೆ.
ಸೆ.24ರೊಳಗೆ ನಗರದಲ್ಲಿ ಒಂದೇ ಒಂದು ಗುಂಡಿ ಇಲ್ಲದಂತೆ ಮುಚ್ಚಲು ನ್ಯಾಯಾಲಯ ಕಟ್ಟುನಿಟ್ಟಿನ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಎಲ್ಲಾ ವಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಗುಂಡಿ ಮುಚ್ಚಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
ಶುಕ್ರವಾರ ರಜಾ ದಿನವಾದರೂ ಅಧಿಕಾರಿ ಮತ್ತು ಸಿಬ್ಬಂದಿ ಗುಂಡಿ ಮುಚ್ಚುವ ಕಾರ್ಯದ ಮೇಲ್ವಿಚಾರಣೆ ನಡೆಸಿದರು. ಶುಕ್ರವಾರ ಸಂಜೆ ವೇಳೆಗೆ 517 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಒಂದೆಡೆ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯದಲ್ಲಿ ಬಿಬಿಎಂಪಿ ಅಧಿಕಾರಿಗಳು ವಿಶ್ರಾಂತಿ ಇಲ್ಲದೆ ಕಾರ್ಯನಿರ್ವಹಿಸಲು ಮುಂದಾಗಿದ್ದರೆ, ಮತ್ತೊಂದೆಡೆ ಹಲವು ಸಮಸ್ಯೆಗಳು ಎದುರಾಗುತ್ತಿವೆ. ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯದ ವೇಳೆ ಸಂಚಾರ ದಟ್ಟಣೆ ಸಮಸ್ಯೆಗಳು ಎದುರಾಗುತ್ತಿವೆ. ರಿಚ್ ಮಂಡ್ ಟೌನ್ ನಲ್ಲಿ ನಿನ್ನೆ ಸಾಕಷ್ಟು ಸಂಚಾರ ದಟ್ಟಣೆ ಎದುರಾಗಿತ್ತು. ಈ ಹಿನ್ನಲೆಯಲ್ಲಿ ರಾತ್ರಿ ವೇಳೆ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಸಲು ಬಿಬಿಎಂಪಿ ಮುಂದಾಗಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಸ್ವತಃ ಬಿಬಿಎಂಪಿ ಮೇಯರ್ ಸಂಪತ್ ರಾಜ್ ಹಾಗೂ ಇತರೆ ಅಧಿಕಾರಿಗಳು ಬಸವನಗುಡಿಯ ನ್ಯಾಷನಲ್ ಕಾಲೇಜು ಮೇಲ್ಸೇತುವೆ ಕೆಳಗೆ ನಡೆಸುತ್ತಿದ್ದ ಕಾರ್ಯಗಳನ್ನು ಪರಿಶೀಲನೆ ನಡೆಸಿದರು.
ಬೆಳಗಿ ಸಮಯಕ್ಕಿಂತಲೂ ರಾತ್ರಿ ಸಮಯದಲ್ಲಿ ಕೆಲಸ ಮಾಡಲು ಸುಲಭವಾಗಿರುತ್ತದೆ. ಬೆಳಿಗ್ಗೆ ಕಾರ್ಯಗಳನ್ನು ಆರಂಭಿಸಿದರೆ, ಸಾಕಷ್ಟು ಸಂಚಾರ ದಟ್ಟಣೆ ಎದುರಾಗುತ್ತದೆ. ಇದರಿಂತ ನಮ್ಮ ಕೆಲಸದ ಮೇಲೂ ಪರಿಣಾಮ ಬೀರುತ್ತದೆ. ಕೇವಲ ಶೇ.10 ರಷ್ಟು ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಬಿಬಿಎಂಪಿ ಇಂಜಿನಿಯರ್ ಮುಖ್ಯಸ್ಥ ಎಂ.ಆರ್ ವೆಂಕಟೇಶ್ ಅವರು ಹೇಳಿದ್ದಾರೆ.
ಬಿಬಿಎಂಪಿ ಕಾರ್ಮಿಕರು ಹಾಗೂ ಅಧಿಕಾರಿಗಳು ರಜೆಗಳನ್ನು ತೆಗೆದುಕೊಳ್ಳುತ್ತಿಲ್ಲ. ಭಾನುವಾರ ಕೂಡ ಕೆಲಸ ಮಾಡಲಿದ್ದಾರೆ. ಶುಕ್ರವಾರ 7.30ರವರೆಗೂ 517 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ನ್ಯಾಯಾಲಯ ಗಡುವಿನೊಳಗೆ ನಗರವನ್ನು ಗುಂಡಿ ಮುಕ್ತವಾಗಿಸಲಾಗುತ್ತದೆ. ಮಹದೇವಪುರದಲ್ಲಿ 578 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ. ಪ್ರಮುಖ ರಸ್ತೆಗಳಲ್ಲಿ 356 ಗುಂಡಿಗಳನ್ನು ಮುಚ್ಚಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


