ದುನಿಯಾ ವಿಜಿಗೆ ಮತ್ತೊಂದು ಸಂಕಷ್ಟ: ಮೊದಲ ಪತ್ನಿಯಿಂದ 2ನೇ ಪತ್ನಿ ವಿರುದ್ಧ ದೂರು!
ಮಾರುತಿ ಗೌಡ ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧ ನಟ ದುನಿಯಾ ವಿಜಯ್ ಬಂಧಿತನಾಗಿದ್ದು ಇದರ ಬೆನ್ನಲ್ಲೇ ಮೊದಲ ಪತ್ನಿ ನಾಗರತ್ನ ಎರಡನೇ ಪತ್ನಿ ಕೀರ್ತಿ...

Published On :
ಬೆಂಗಳೂರು: ಮಾರುತಿ ಗೌಡ ಅಪಹರಣ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧ ನಟ ದುನಿಯಾ ವಿಜಯ್ ಬಂಧಿತನಾಗಿದ್ದು ಇದರ ಬೆನ್ನಲ್ಲೇ ಮೊದಲ ಪತ್ನಿ ನಾಗರತ್ನ ಎರಡನೇ ಪತ್ನಿ ಕೀರ್ತಿ ವಿರುದ್ಧ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ.
ದುನಿಯಾ ವಿಜಯ್ ಎರಡನೇ ಪತ್ನಿ ಕೀರ್ತಿ ಗೌಡ ಹಾಗೂ ಇಬ್ಬರು ಬೌನ್ಸರ್ ಗಳು ತಮ್ಮ ಮೇಲೆ ಹಲ್ಲೆ ನಡೆಸಿದ್ದರು ಎಂದು ಆರೋಪಿ ನಾಗರತ್ನ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಈ ಹಿನ್ನೆಲೆಯಲ್ಲಿ ಪೊಲೀಸರು ಕೀರ್ತಿ ಗೌಡ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ದುನಿಯಾ ವಿಜಯ್ ಬಂಧನದ ವೇಳೆ ಮಗ ಸಾಮ್ರಾಟ್ ವಿಜಯ್ ಜೊತೆ ಇದ್ದಿದ್ದರಿಂದ ನಾಗರತ್ನ ಅವರು ಮಗ ಬಗ್ಗೆ ವಿಚಾರಿಸಲು ಹೋದ ಸಂದರ್ಭದಲ್ಲಿ ಕೀರ್ತಿ ಗೌಡ ಹಾಗೂ ಇಬ್ಬರು ಬೌನ್ಸರ್ ಗಳು ಹಲ್ಲೆ ಮಾಡಿದ್ದಾರೆ ಎಂದು ನಾಗರತ್ನ ದೂರು ದಾಖಲಿಸಿದ್ದಾರೆ.
ದುನಿಯಾ ವಿಜಯ್ ಮಾರುತಿ ಗೌಡ ಮೇಲೆ ಹಲ್ಲೆ ನಡೆಸಿದ ಸಂದರ್ಭದಲ್ಲಿ ಸಾಮ್ರಾಟ್ ಸಹ ಜೊತೆಯಲ್ಲಿದ್ದ ಆತನ ಮೇಲೆ ಸಹ ಹಲ್ಲೆಯಾಗಿದೆ ಎಂಬ ವರದಿ ಮಾಧ್ಯಮಗಳಲ್ಲಿ ಬಿತ್ತರಗೊಂಡ ಹಿನ್ನೆಲೆಯಲ್ಲಿ ನೊಂದ ನಾಗರತ್ನ ಅವರು ಮಗನ ಯೋಗಕ್ಷೇಮ ವಿಚಾರಿಸಲು ಕೀರ್ತಿಗೌಡ ಮನೆಗೆ ಹೋಗಿದ್ದಾಗ ಹಲ್ಲೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


