ರಾಜ್ಯ

ಜೆಡಿಎಸ್ ಶಾಸಕಾಂಗ ಸಭೆ ಅಂತ್ಯ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಚರ್ಚೆ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ತವರು ಜಿಲ್ಲೆ ಹಾಸನದಲ್ಲಿ ಹೊಯ್ಸಳ ರೆಸಾರ್ಟ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆ ಅಂತ್ಯಗೊಂಡಿದೆ.

ಜೆಡಿಎಸ್ ಶಾಸಕಾಂಗ ಸಭೆ ಅಂತ್ಯ :ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಕುರಿತು ಚರ್ಚೆ
ಬಂಡೆಪ್ಪ ಕಾಶೆಂಪೂರ್,
Published On :

ಹಾಸನ : ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ತವರು ಜಿಲ್ಲೆ ಹಾಸನದಲ್ಲಿ ಹೊಯ್ಸಳ ರೆಸಾರ್ಟ್ ನಲ್ಲಿ ನಡೆದ ಜೆಡಿಎಸ್ ಶಾಸಕಾಂಗ ಸಭೆ ಅಂತ್ಯಗೊಂಡಿದೆ.

ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ, ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ  ಪಕ್ಷದ  ಒಟ್ಟು 37 ಶಾಸಕರ ಪೈಕಿ 35 ಶಾಸಕರು ಪಾಲ್ಗೊಳ್ಳುವ ಮೂಲಕ ತಮ್ಮ ಒಗ್ಗಟ್ಟು ಪ್ರದರ್ಶಿಸಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್,  ಇಬ್ಬರು ಶಾಸಕರು ಪೂರ್ವನಿಗದಿತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗಿದ್ದರಿಂದ ಅನುಮತಿ ಪಡೆದು ಗೈರಾಗಿದ್ದಾರೆ ಎಂದು ತಿಳಿಸಿದರು.

 2019ರ ಲೋಕಸಭಾ ಚುನಾವಣೆ, ಆಪರೇಷನ್ ಕಮಲ ,ವಿಧಾನಪರಿಷತ್  ಉಪಚುನಾವಣೆ,ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಕುರಿತಂತೆ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು.

 ನಿಗಮ, ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳನ್ನು ಶೀಘ್ರವೇ ಭರ್ತಿ ಮಾಡುವಂತೆ ಎಚ್. ಡಿ. ದೇವೇಗೌಡರು  , ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಲಹೆ ನೀಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.