ವರನಟ ಡಾ.ರಾಜ್ ಕುಮಾರ್ ಕಿಡ್ನಾಪ್ ಕೇಸ್: 9 ಆರೋಪಿಗಳು ಖುಲಾಸೆ
ಕಾಡುಗಳ್ಳ ವೀರಪ್ಪನ್ ವರನಟ ಡಾ. ರಾಜ್ಕುಮಾರ್ ಅವರನ್ನು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದಿದ್ದು.

Published On :
ಈರೋಡ್: ಕಾಡುಗಳ್ಳ ವೀರಪ್ಪನ್ ವರನಟ ಡಾ. ರಾಜ್ಕುಮಾರ್ ಅವರನ್ನು ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪು ಹೊರಬಿದ್ದಿದ್ದು. ಎಲ್ಲಾ 9 ಆರೋಪಿಗಳನ್ನು ಖುಲಾಸೆಗೊಳಿಸಿ ಈರೋಡ್ನ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಆರೋಪ ಸಾಬೀತುಪಡಿಸವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಕಾರಣ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿ ಕೋರ್ಟ್ತೀರ್ಪು ಪ್ರಕಟಿಸಿದೆ.
2000 ಇಸವಿಯ ಜುಲೈ 30 ರಂದು, ಗಾಜನೂರಿನ ತೋಟದ ಮನೆಯಿಂದ ಡಾ.ರಾಜ್ ಅವರನ್ನು, ವೀರಪ್ಪನ್ ಮತ್ತವರ ತಂಡ ಅಪಹರಿಸಿತ್ತು. 3 ತಿಂಗಳ ಕಾಲ ರಾಜ್ ಅವರನ್ನು ಸತ್ಯಮಂಗಳಂ ಹಾಗೂ ಭವಾನಿ ಕಾಡಿನಲ್ಲಿ ಇರಿಸಿಕೊಳ್ಳಲಾಗಿತ್ತು.
ತಮಿಳು ಮ್ಯಾಗಜೀನ್ನಕ್ಕೀರನ್ನ ಪತ್ರಕರ್ತ ಆರ್ಆರ್ ಗೋಪಾಲ್ ನೇತೃತ್ವದಲ್ಲಿ 6 ಸುತ್ತುಗಳ ಮಾತುಕತೆಯ ಬಳಿಕ ಕೊನೆಗೂ 108 ದಿನಗಳ ಬಳಿಕ ರಾಜ್ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಬಿಡುಗಡೆ ಮಾಡಿದ್ದ.
ಈ ಸೆನ್ಸೇಷನಲ್ ಕೇಸ್ನಲ್ಲಿ ವೀರಪ್ಪನ್ ಸೇರಿದಂತೆ 12 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅವರಲ್ಲಿ ವೀರಪ್ಪನ್, ಸೇತುಕುಡಿ ಗೋವಿಂದನ್ ಹಾಗೂ ರಂಗಸಾಮಿ ವಿಚಾರಣೆ ವೇಳೆಯೇ ಸಾವನ್ನಪ್ಪಿದ್ದಾರೆ.
ತಮಿಳುನಾಡಿನ ಈರೋಡ್ ಜಿಲ್ಲೆಯ ಗೋಪಿಚೆಟ್ಟಿಪಾಳ್ಯಂನ ನ್ಯಾಯಾಲಯ ಈ ಕುರಿತು ಇಂದು ತೀರ್ಪು ಪ್ರಕಟಿಸಿದ್ದು. ಐವರು ಆರೋಪಿಗಳಾದ ಗೋವಿಂದರಾಜ್, ಅನಂತಿಲ್, ಪುಸವಣ್ಣ, ಕುಪ್ಪಸ್ವಾಮಿ ಮತ್ತಿತ್ತರನ್ನು ಖುಲಾಸೆಗೊಳಿಸಿ ಅಂತಿಮ ತೀರ್ಪು ನೀಡಿದೆ.
2000 ಜುಲೈ 30ರಂದು ಈರೋಡ್ನ ದೊಡ್ಡಗಾಜನೂರಿನ ರಾಜ್ಕುಮಾರ್ ಅವರ ತೋಟದ ಮನೆಯಿಂದ ಹಣಕ್ಕಾಗಿ ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದ. ಹಣದ ಬೇಡಿಕೆಯಿಟ್ಟು ಅವರನ್ನು 108 ದಿನಗಳ ಕಾಲ ಕಾಡಿನಲ್ಲಿಯೇ ಕಾಲ ಕಳೆಯುವಂತೆ ಮಾಡಿದ್ದ. ಅಪರಹರಣದ ವೇಳೆ ರಾಜ್ ಕುಮಾರ್ ಅವರ ಜೊತೆ ಪತ್ನಿ ಪಾರ್ವತಮ್ಮ ಇದ್ದರು.
ರಾಜ್ ಕುಮಾರ್ ಅವರನ್ನು ಕಿಡ್ನಾಪ್ ಮಾಡಿದ್ದ ವೀರಪ್ಪನ್ ಬೆಂಗಳೂರಿನಲ್ಲಿ ತಿರುವಲ್ಲೂವರ್ ಪ್ರತಿಮೆ ಸ್ಠಾಪನೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದ. ಈ ಸಂಬಂಧ ತಾಳವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. 2004 ರಲ್ಲಿ ಧರ್ಮಪುರಿಯಲ್ಲಿ ಎಸ್ ಟಿ ಎಫ್ ತಂಡ ವೀರಪ್ಪನ್ ನನ್ನು ಗುಂಡಿಟ್ಟು ಹತ್ಯೆ ಮಾಡಿತ್ತು.18 ವರ್ಷ 2 ತಿಂಗಳ ಬಳಿಕ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ತೀರ್ಪು ನೀಡಿದೆ,
7 ವರ್ಷಗಳ ಹಿಂದೆ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು , ಸುಮಾರು 10 ಮಂದಿ ನ್ಯಾಯಾಧೀಶರು ವಿಚಾರಣೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


