ರಾಜ್ಯ

ನಟ ವಿಜಯ್ ಪ್ರತಿದೂರು: ಮಾರುತಿ ಗೌಡ, ಪಾನಿಪೂರಿ ಕಿಟ್ಟಿ ವಿರುದ್ಧ ಎಫ್ ಐಆರ್ ದಾಖಲಿಸಿದ ಪೊಲೀಸರು !

ಅಪಹರಣ ಹಾಗೂ ಹಲ್ಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದುನಿಯಾ ವಿಜಯ್ ನೀಡಿದ ಪ್ರತಿ ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸರು ಮಾರುತಿ ಗೌಡ ಹಾಗೂ ಪಾನಿಪೂರಿ ಕಿಟ್ಟಿ ವಿರುದ್ಧ ಎಫ್ ಐ ಆರ್ ದಾಖಲಿಸಿಕೊಂಡಿದ್ದಾರೆ.

ನಟ ವಿಜಯ್ ಪ್ರತಿದೂರು: ಮಾರುತಿ ಗೌಡ, ಪಾನಿಪೂರಿ ಕಿಟ್ಟಿ ವಿರುದ್ಧ ಎಫ್ ಐಆರ್ ದಾಖಲಿಸಿದ ಪೊಲೀಸರು !
ವಿಜಯ್, ಪಾನಿಪೂರಿ ಕಿಟ್ಟಿ
Published On :

ಬೆಂಗಳೂರು: ಅಪಹರಣ ಹಾಗೂ ಹಲ್ಲೆ ಪ್ರಕರಣದಲ್ಲಿ  ಜೈಲಿನಲ್ಲಿರುವ  ನಟ ದುನಿಯಾ ವಿಜಯ್   ನೀಡಿದ ಪ್ರತಿ ದೂರಿನ ಆಧಾರದ ಮೇಲೆ  ಹೈಗ್ರೌಂಡ್ಸ್  ಪೊಲೀಸರು  ಮಾರುತಿ ಗೌಡ ಹಾಗೂ ಪಾನಿಪೂರಿ ಕಿಟ್ಟಿ ವಿರುದ್ಧ ಎಫ್ ಐ ಆರ್  ದಾಖಲಿಸಿಕೊಂಡಿದ್ದಾರೆ.

ಚಿತ್ರವೊಂದರಲ್ಲಿ ಅಭಿನಯಿಸಿರುವ ತನ್ನ ಮಗನನ್ನು ಮಾರುತಿಗೌಡ ನಿಂದಿಸಿದಲ್ಲದೇ, ತಂದೆ ಹಾಗೂ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಹೈಗ್ರೌಂಡ್ಸ್  ಪೊಲೀಸ್ ಠಾಣೆಗೆ ಹೋದಾಗ ಪಾನಿಪೂರಿ ಕಿಟ್ಟಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವಿಜಯ್ ಶನಿವಾರ ತಡರಾತ್ರಿ ಪ್ರತಿ ದೂರು ದಾಖಲಿಸಿದ್ದರು.
ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಸೋಮವಾರ ಎಫ್ ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.