ರಂಗಕರ್ಮಿ ಹೆಗ್ಗೋಡು ಪ್ರಸನ್ನಗೆ 'ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ'
ಖ್ಯಾತ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ '2018ನೇ ಸಾಲಿನ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ' ನಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.

Published On :
ಬೆಂಗಳೂರು: ಖ್ಯಾತ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ '2018ನೇ ಸಾಲಿನ ಮಹಾತ್ಮಾಗಾಂಧಿ ಸೇವಾ ಪ್ರಶಸ್ತಿ' ನಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಅಧ್ಯಕ್ಷತೆಯ ಸಮಿತಿ ಪ್ರಸನ್ನ ಅವರನ್ನು ಪುರಸ್ಕಾರಕ್ಕಾಗಿ ಆಯ್ಕೆ ಮಾಡಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಿಡಲಾಗುವ ಈ ಪ್ರಶಸ್ತಿ 5 ಲಕ್ಷ ರೂ ನಗದು, ಸ್ಮರಣಿಕೆ ಒಳಗೊಂಡಿರಲಿದೆ.ಇದೇ ಗಾಂಧಿ ಜಯಂತಿ (ಅಕ್ಟೋಬರ್ 2)ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನೆರವೇರಲಿದೆ.
ಇದಕ್ಕೆ ಮುನ್ನ ಎಸ್.ಎನ್. ಸುಬ್ಬರಾವ್, ಹೋ. ಶ್ರೀನಿವಾಸಯ್ಯ, ಚನ್ನಮ್ಮ ಹಳ್ಳಿಕೇರಿ ಹಾಗೂ ಹೆಚ್.ಎಸ್. ದೊರೆಸ್ವಾಮಿ ಅವರುಗಳು ಈ ಉನ್ನತ ಗೌರವಕ್ಕೆ ಭಾಜನರಾಗಿದ್ದರು.
ಪ್ರಸನ್ನ ಹಲವಾರು ವರ್ಷಗಳಿಂದ ರಂಗಕಲೆ, ನಾಟಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕಲ್ಕತ್ತದ ನಂದಿಕಾರ್ ಪ್ರಶಸ್ತಿ, ಚದುರಂಗ ಪ್ರಶಾಸ್ತಿ, ಬಿ.ವಿ.ಕಾರಂತ ಸಂಸ್ಮರಣೆ ಪ್ರಶಸ್ತಿ ಸೇರಿ ಅನೇಕ ಪುರಸ್ಕಾರ, ಗೌರವಕ್ಕೆ ಪಾತ್ರರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಎಚ್.ಡಿ.ಕುಮಾರಸ್ವಾಮಿHD KumaraswamyHeggodu PrasannaMahatma Gandhi Seva Awardಹೆಗ್ಗೋಡು ಪ್ರಸನ್ನಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


