ಅಪಹರಣ, ಹಲ್ಲೆ ಪ್ರಕರಣ: ದುನಿಯಾ ವಿಜಯ್ ಜಾಮೀನು ಅರ್ಜಿ ವಜಾಗೊಳಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್
ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಟ ವಿಜಯ್ ಜಾಮೀನು ಅರ್ಜಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕರಿಸಿದೆ.

Published On :
ಬೆಂಗಳೂರು: ಜಿಮ್ ಟ್ರೈನರ್ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರನ್ನು ಅಪಹರಿಸಿ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ನಟ ವಿಜಯ್ ಜಾಮೀನು ಅರ್ಜಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ತಿರಸ್ಕರಿಸಿದೆ.
ಮ್ಕ್ಯಾಜಿಸ್ಟ್ರೇಟ್ ಕೋರ್ಟ್ ನಲ್ಲಿ ನಟ ದುನಿಯಾ ವಿಜಯ್ ಪರ ವಾದ ಮಂಡಿಸಿದ್ದ ವಕೀಲರು ತಮ್ಮ ಕಕ್ಷಿದಾರರ ವಿರೌದ್ಧ ಪೊಲೀಸರು ಸೆಕ್ಷನ್ .326 ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಕ್ಕೆ ಆಕ್ಷೇಪಿಸಿದ್ದರು.
ನಡೆದಿರುವ ಘಟನೆಯಲ್ಲಿ ಮಾರಕಾಸ್ತ್ರಗಳು ಬಳಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದು ಜಾಮೀನು ನೀಡಬಹುದಾದ ಪ್ರಕರಣವಾಗಿದೆ ಎಂದು ವಿಜಯ್ ಪರ ವಾದ ಮಂಡಿಸಿರುವ ವಕೀಲರು ಹೇಳಿದ್ದರು. ಆದರೆ ವಿಜಯ್ ಗೆ ಜಾಮೀನು ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪಬ್ಲಿಕ್ ಪ್ರಾಸಿಕ್ಯೂಟರ್ ಇದು ಗಂಭೀರ ಪ್ರಕರಣವಗಿದ್ದು ಜಾಮೀನು ನೀಡಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ ಎಂದಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಆದೇಶವನ್ನು ಸೆ.26 ಕ್ಕೆ ಕಾಯ್ದಿರಿಸಿತ್ತು. ಈಗ ಪ್ರಕರಣದ 4 ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ದುನಿಯಾ ವಿಜಯ್duniya vijaybail pleaಜಾಮೀನು ಅರ್ಜಿassault caseಹಲ್ಲೆ ಪ್ರಕರಣBengaluru Magistrate courtಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


