ಲಿವ್ ಇನ್ ಪಾರ್ಟನರ್ ಜೊತೆ ಜಗಳ: ಮನನೊಂದ ಟೆಕಿ ಆತ್ಮಹತ್ಯೆ
ಲಿವ್ ಇನ್ ಪಾರ್ಟನರ್ ಜೊತೆಗಿನ ಕಲಹದಿಂದ ಬೇಸತ್ತ ಟೆಕಿಯೊಬ್ಬ ತನ್ನ ಫ್ಲ್ಯಾಟ್ ನಲ್ಲೇ ನೇಣಿಗೆ ಶರಣಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ...

Published On :
ಬೆಂಗಳೂರು: ಲಿವ್ ಇನ್ ಪಾರ್ಟನರ್ ಜೊತೆಗಿನ ಕಲಹದಿಂದ ಬೇಸತ್ತ ಟೆಕಿಯೊಬ್ಬ ತನ್ನ ಫ್ಲ್ಯಾಟ್ ನಲ್ಲೇ ನೇಣಿಗೆ ಶರಣಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.
ದೊಡ್ಡಟಾಗೂರ್ ನಿವಾಸಿ ಚಂದ್ರಶೇಖರ್ ನೇಣಿಗೆ ಶರಣಾದ ಟೆಕಿ, ಸೋಮವಾರ ಘಟನೆ ನಡೆದಿದ್ದು, ಫ್ಲ್ಯಾಟ್ ನಲ್ಲಿ ಸಿಕ್ಕ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಯಾರು ಕಾರಣರಲ್ಲ ಎಂದು ಬರೆಯಲಾಗಿದೆ.
ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಚಂದ್ರಶೇಖರ್ ಕಳೆದ ಕೆಲವು ವರ್ಷಗಳಿಂದ ಲಿವ್ ಇನ್ ಪಾರ್ಟನರ್ ಜೊತೆ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಇಬ್ಬರು ಮಾರತ್ ಹಳ್ಳಿಯ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು, 3 ತಿಂಗಳ ಹಿಂದೆ ಲಿವ್ ಇನ್ ಪಾರ್ಟನರ್ ಗೆ ಚಂದ್ರಶೇಖರ್ ಹಲ್ಲೆ ಮಾಡಿದ್ದರು, ಆಗ ಆಕೆ ಪೊಲೀಸರ ಸಹಾಯ ಪಡೆದಿದ್ದಳು, ಅಂದು ಪೊಲೀಸರು ಆತನಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದರು, ಅಂದಿನಿಂದ ಆತ ಖಿನ್ನತೆಗೊಳಗಾಗಿದ್ದ, ಸೋಮವಾರ ಮತ್ತೆ ಇಬ್ಬರು ಜಗಳ ಮಾಡಿಕೊಂಡಿದ್ದಾರ. ಈ ವೇಳೆ ತನ್ನ ರೂಮಿನಲ್ಲಿ ಚಂದ್ರಶೇಖರ್ ನೇಣಿಗೆ ಶರಣಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


