84ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ್ ಆಯ್ಕೆ
ಧಾರವಾಡದಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ...

Published On :
ಗದಗ: ಧಾರವಾಡದಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ್ ಕಂಬಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ಗದಗದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚಂದ್ರಶೇಖರ ಕಂಬಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅವರು ತಿಳಿಸಿದ್ದಾರೆ.
ಕಾರ್ಯಕಾರಿ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮನು ಬಳಿಗಾರ್ ಅವರು 84ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 7 ಮತ್ತು ಡಿಸೆಂಬರ್ 8ರಂದು ಧಾರವಾಡದಲ್ಲಿ ನಡೆಯಲಿದೆ ಎಂದು ಹೇಳಿದರು.
ಚಂದ್ರಶೇಖರ್ ಕಂಬಾರ್ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರೂ ಆಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Presidentಅಧ್ಯಕ್ಷChandrashekhar Kambar84th Kannada Sahitya Sammelana84ನೇ ಕನ್ನಡ ಸಾಹಿತ್ಯ ಸಮ್ಮೇಳನಚಂದ್ರಶೇಖರ ಕಂಬಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


