ರಾಜ್ಯ

ಮಂಗಳೂರು ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅನಾಹುತ, ಅಪಾರ ಪ್ರಮಾಣದ ಸ್ವತ್ತು ನಾಶ

ಮಂಗಳೂರು ನಗರದ ಶಾಪಿಂಗ್ ಮಾಲ್ ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಸ್ವತ್ತು ನಾಶವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

ಮಂಗಳೂರು ಶಾಪಿಂಗ್ ಮಾಲ್ ನಲ್ಲಿ ಅಗ್ನಿ ಅನಾಹುತ, ಅಪಾರ ಪ್ರಮಾಣದ ಸ್ವತ್ತು ನಾಶ
ಸಂಗ್ರಹ ಚಿತ್ರ
Published On :
ಮಂಗಳುರು: ಮಂಗಳೂರು ನಗರದ ಶಾಪಿಂಗ್ ಮಾಲ್ ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಅಪಾರ ಪ್ರಮಾಣದ ಸ್ವತ್ತು ನಾಶವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಮಂಗಳೂರಿನ ಗಣಪತಿ ಹೈಸ್ಕೂಲ್ ರಸ್ತೆಯ ಅಗ್ನಿ ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ಬೆಂಕಿಯಿಂದ ಎರಡು ಮಳಿಗೆಗಳು ಸಂಪೂರ್ಣ ಸುಟ್ಟು ಹೋಗಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವ ಪ್ರಾಣಹಾನಿ ಸಂಭವಿಸಲಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಬವಿಸಿದೆ ಎನ್ನಲಾಗಿದ್ದು  ಸೆಲೆಕ್ಷನ್‌ ಸೆಂಟರ್‌ ಮತ್ತು ಕಾಮತ್‌ ಕೋ  ಮಳಿಗೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಅವಘಡದ ಮಾಹಿತಿ ತಿಳಿದ ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ತಹಬಂದಿಗೆ ತಂದಿದೆ.
ಘಟನಾ ಸ್ಥಳಕ್ಕೆ ಮೇಯರ್‌ ಭಾಸ್ಕರ್‌ ಮೊಯಿಲಿ, ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌,ಡಿಸಿಪಿ ಉಮಾ ಪ್ರಶಾಂತ್‌ ,ಮೊದಲಾದವರು ಆಗಮಿಸಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.