ಸುಮಲತಾಗೆ ಪರೋಕ್ಷವಾಗಿ ಬೆಂಬಲ ಸೂಚಿಸಿದ ಯದುವೀರ್ ಒಡೆಯರ್
ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್...

Published On :
ಮೈಸೂರು: ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರಿಗೆ ಪರೋಕ್ಷವಾಗಿ ಬೆಂಬಲ ಸೂಚಿಸಿದ್ದು, ಅಂಬರೀಷ್ ಅವರಿಗೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧ ಇತ್ತು ಎಂದು ಮಂಗಳವಾರ ಹೇಳಿದ್ದಾರೆ.
ಇಂದು ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯದುವೀರ್ ಅವರು, ನಮ್ಮ ತಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್, ಅಂಬರೀಷ್ ಜೊತೆಯಲ್ಲಿ 35 ವರ್ಷಗಳ ಒಡನಾಟ ಹೊಂದಿದ್ದರು. ಅರಮನೆಯ ಕಷ್ಟದ ಸಂದರ್ಭದಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ಅವರ ಸಹಾಯವನ್ನು ಮರೆಯುವಂತಿಲ್ಲ. ಅವರಿಗೆ ಮೈಸೂರು ರಾಜ ಮನೆತನ ಎಂದಿಗೂ ಕೃತಜ್ಞವಾಗಿರುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸುಮಲತಾ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್ ಒಡೆಯರ್ ಅವರು, ಅವರ ಹೋರಾಟಕ್ಕೆ ಒಳ್ಳೆಯದಾಗಲಿ. ಬಹಿರಂಗ ಪ್ರಚಾರಕ್ಕೆ ನಾನು ತೆರಳುವುದಿಲ್ಲ. ನಾನು ರಾಜಕೀಯದಿಂದ ದೂರ ಇದ್ದೇನೆ. ಮಂಡ್ಯದ ಜನರಿಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ಅವರೇ ಉತ್ತರ ನೀಡಲಿದ್ದಾರೆ ಎಂದು ಪರೋಕ್ಷವಾಗಿ ಸುಮಲತಾ ಅಂಬರೀಷ್ ಗೆ ಬೆಂಬಲ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


