ವಿಜಯಪುರ: 24 ಅಕ್ರಮ ಬಾಂಗ್ಲಾ ನುಸುಳುಕೋರರ ಗಡಿಪಾರು
ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ 24 ಅಕ್ರಮ ವಲಸಿಗರನ್ನು ವಿಜಯಪುರ ಪೋಲೀಸರು ಅವರ ದೇಶಕ್ಕೆ ಗಡಿಪಾರು ಮಾಡಿದ್ದಾರೆ.

Published On :
ವಿಜಯಪುರ: ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ 24 ಅಕ್ರಮ ವಲಸಿಗರನ್ನು ವಿಜಯಪುರ ಪೋಲೀಸರು ಅವರ ದೇಶಕ್ಕೆ ಗಡಿಪಾರು ಮಾಡಿದ್ದಾರೆ.
ಅಕ್ರಮವಾಗಿ ವಿಜಯಪುರದಲ್ಲಿ ನೆಲೆಸಿದ್ದ 24 ಬಾಂಗ್ಲಾದೇಶೀಯರನ್ನು ಪೋಲೀಸರು 2016ರ ಡಿಸೆಂಬರ್ ನಲ್ಲಿ ಬಂಧಿಸಿದ್ದರು. ಅದರಿಂದಾಚೆಗೆ ಬಾಂಗ್ಲಾ ರಾಯಭಾರ ಕಛೇರಿಯೊಡನೆ ನಿರಂತರ ಸಂಪರ್ಕ ಸಾಧಿಸಿದ್ದ ಪೋಲೀಸರು ಅಂತಿಮವಾಗಿ ನುಸುಳುಕೋರರನ್ನು ಅವರ ರಾಷ್ಟ್ರಕ್ಕೆ ಗಡಿಪಾರು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಇದಾಗಲೇ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ಇವರುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಗುರುವಾರ ಹೈದರಾಬಾದ್ ಮುಖಾಂತರ ಅವರ ರಾಷ್ಟ್ರಕ್ಕೆ ಹಸ್ತಾಂತರಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


