ಬೆಂಗಳೂರು: ಲೋಕಸಭಾ ಸದಸ್ಯರ ನಿಧಿ ಬಳಕೆಯಲ್ಲಿ ಡಿವಿಎಸ್ ಮುಂದು
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ.ಸದಾನಂದಗೌಡ ಅವರು ಕಳೆದ ಐದು ವರ್ಷಗಳಲ್ಲಿ ತಮ್ಮ ಸಂಸದರ ನಿಧಿಯನ್ನು ಸಂಪೂರ್ಣ ಬಳಕೆ ಮಾಡಿಕೊಂಡಿದ್ದಾರೆ.

Published On :
ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ.ವಿ.ಸದಾನಂದಗೌಡ ಅವರು ಕಳೆದ ಐದು ವರ್ಷಗಳಲ್ಲಿ ತಮ್ಮ ಸಂಸದರ ನಿಧಿಯನ್ನು ಸಂಪೂರ್ಣ ಬಳಕೆ ಮಾಡಿಕೊಂಡಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಅವರು ಶೇ.95ರಷ್ಟು ಹಾಗೂ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ದಿ.ಅನಂತಕುಮಾರ್ ಅವರು ಶೇ.82 ರಷ್ಟು ನಿಧಿಯನ್ನು ಬಳಕೆ ಮಾಡಿದ್ದು, ಮೂರು ಕ್ಷೇತ್ರಗಳಲ್ಲಿ ನಾಗರಿಕ ಅಭಿವೃದ್ಧಿ ಯೋಜನೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ಬಿ.ಪ್ಯಾಕ್ ಸಂಸ್ಥೆ ತಿಳಿಸಿದೆ.
ಸುದ್ದಿಗೋಷ್ಠಿಯಲ್ಲಿಂದು ಈ ವರದಿ ಬಿಡುಗಡೆ ಮಾಡಿದ ಸಿಇಒ ರೇವತಿ ಮಾತನಾಡಿ, ವರದಿಯಲ್ಲಿ 2014-15ರಿಂದ 2018-19ರವರೆಗಿನ ಸಂಸದರು ಸ್ಥಳೀಯ ಅಭಿವೃದ್ಧಿ ಯೋಜನೆಗಳಿಗೆ ವ್ಯಯಿಸಿದ ಮೊತ್ತದ ವಿವರಗಳಿವೆ. ನಗರ ಜಿಲ್ಲಾಧಿಕಾರಿಗಳ ಮೂಲಕ ಈ ಮಾಹಿತಿಗಳನ್ನು ಸಂಗ್ರಹಿಸಲಾಗಿದೆ. ಮೂರು ಲೋಕಸಭಾ ಕ್ಷೇತ್ರದ ಸಂಸದ ಸದಸ್ಯರು ಕೈಗೊಂಡಿದ್ದ ಕಾರ್ಯಕ್ರಮ ಆಧಾರಿತ ವೆಚ್ಚದ ವಿವರ ಹಾಗೂ ಶೇಕಡಾವಾರು ಬಳಕೆಯನ್ನು ಲೆಕ್ಕ ಹಾಕಲಾಗಿದೆ ಎಂದು ಅವರು ತಿಳಿಸಿದರು.
ಒಟ್ಟು 60 ಕೋಟಿ ರೂ ನಿಧಿಯಲ್ಲಿ, 55 ಕೋಟಿ ರೂ. ಬಳಸಿಕೊಳ್ಳಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ 61 ಹಾಗೂ ಬಿಬಿಎಂಪಿ ಹೊರತು ಪಡಿಸಿ ಶೇ 39ರಷ್ಟು ನಿಧಿ ಬಳಕೆ ಮಾಡಲಾಗಿದೆ. ಕುಡಿಯುವ ನೀರು ಹಾಗೂ ಮೂಲ ಸೌಕರ್ಯಕ್ಕೆ ಶೇ 25.98, ಮೂಲಸೌಕರ್ಯ ಅಭಿವೃದ್ಧಿಗೆ ಶೇ 12.62 ಹಾಗೂ ಸಾರ್ವಜನಿಕ ಸೌಲಭ್ಯಕ್ಕೆ ಶೇ 10.78 ಉಪಯೋಗಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


