ಉಡುಪಿ: ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ
ಚುನಾವಣೆ ಸಮಯದಲ್ಲಿ ಮನೆಯಲ್ಲಿ ಅಕ್ರಮವಾಗಿ ಹಣ ಇರಿಸಿಕೊಂಡಿದ್ದಾರೆನ್ನುವ ಮಾಹಿತಿ ಮೇರೆಗೆ ಉಡುಪಿ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Published On :
ಉಡುಪಿ: ಚುನಾವಣೆ ಸಮಯದಲ್ಲಿ ಮನೆಯಲ್ಲಿ ಅಕ್ರಮವಾಗಿ ಹಣ ಇರಿಸಿಕೊಂಡಿದ್ದಾರೆನ್ನುವ ಮಾಹಿತಿ ಮೇರೆಗೆ ಉಡುಪಿ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಉಡುಪಿ-ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿಯಾದ ಪ್ರಮೋದ್ ಮದ್ವರಾಜ್ ಬೆಂಬಲಿಗರೆನ್ನಲಾದ ಉದ್ಯಾವರ ನಿವಾಸಿ ಫೈನಾನ್ಸ್ ಮ್ಯಾನೇಜರ್ ಕಟ್ಟೆ ಗುಡ್ಡೆ ಸದಾಶಿವ್ ಹಾಗೂ ಪಿತ್ರೋಡಿ ನಿವಾಸಿ ಲಕ್ಷ್ಮಣ ಸಂಪಿಗೆ ನಗರ ಎನ್ನುವವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸದಾಶಿವ ಅವರ ಮನೆಯಲ್ಲಿ ಕೆಲ ಗಂಟೆಗಳ ಕಾಲ ದಾಕಲೆ ಪರಿಶೀಲನೆ ನಡೆಸಿದ್ದ ಬಳಿಕ ಅವರನ್ನು ಐಟಿ ಕಛೇರಿಗೆ ಕರೆಸಿ ವಿಚಾರಣೆ ನಡೆಸಿದರೆ ಲಕ್ಷ್ಮಣ ಅವರ ಮನೆ ಶೋಧನೆ ಮಾಡಿದ್ದಾರೆ.
ಇದರ ನಡುವೆ ಶುಕ್ರವಾರ ಬೆಳಿಗ್ಗೆ ಕಟಪಾಡಿ-ಶಿರ್ವ ರಸ್ತೆಯಲ್ಲಿ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1,25,690 ರು. ನಗದನ್ನು ಫ್ಲೈಯಿಂಗ್ ಸ್ಕ್ವಾಡ್ ತಂಡ ವಶಕ್ಕೆ ಪಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


