ಆರ್ಸಿಬಿ ಪಂದ್ಯದ ವೇಳೆ ಮೊಹಮ್ಮದ್ ನಲಪಾಡ್ 'ಚೌಕಿದಾರ್ ಚೋರ್ ಹೈ' ಘೋಷಣೆ, ವಿಡಿಯೋ ವೈರಲ್!
ಉದ್ಯಮಿಯೊಬ್ಬರ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜೈಲಿಗೆ ಹೋಗಿ ಬಂದಿದ್ದ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್...

Published On :
ಬೆಂಗಳೂರು: ಉದ್ಯಮಿಯೊಬ್ಬರ ಮಗನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಜೈಲಿಗೆ ಹೋಗಿ ಬಂದಿದ್ದ ಶಾಂತಿನಗರದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಇದೀಗ ಆರ್ಸಿಬಿ ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸೇರಿಕೊಂಡು ಚೌಕಿದಾರ್ ಚೋರ್ ಹೈ ಎಂದು ಘೋಷಣೆ ಕೂಗಿರುವ ವಿಡಿಯೋ ಇದೀಗ ವೈರಲ್ ಆಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದ ವೇಳೆ ತಂಡವನ್ನು ಹುರಿದುಂಬಿಸುವ ಬದಲು ಗ್ಯಾಲರಿಯಲ್ಲಿ ತಮ್ಮ ಬೆಂಬಲಿಗರೊಂದಿಗೆ ಚೌಕಿದಾರ್ ಚೋರ್ ಹೈ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದ್ದಾರೆ.
ಆರ್ಸಿಬಿ ಪಂದ್ಯದ ವೇಳೆ ಕ್ರೀಡಾಭಿಮಾನ ಪ್ರದರ್ಶಿಸುವ ಬದಲು ಮೋದಿ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಉದ್ಧಟನ ಪ್ರದರ್ಶಿಸಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರCricket Offbeatಕ್ರಿಕೆಟ್ ಸ್ವಾರಸ್ಯಮೊಹಮ್ಮದ್ ನಲಪಾಡ್Mohammed NalapadIPL 2019ಐಪಿಎಲ್ 2019Chowkidar Chor Haiಚೌಕಿದಾರ್ ಚೋರ್ ಹೈRCB Matchಆರ್ಸಿಬಿ ಪಂದ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


