ರಾಜ್ಯ

ಏಪ್ರಿಲ್ 17ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್, ಇದೇ ಮೊದಲ ಬಾರಿ ಸಿಇಟಿ ಪರೀಕ್ಷೆಗೆ ಮುನ್ನವೇ ಫಲಿತಾಂಶ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 17ರಂದು ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಸಿಇಟಿ ಪರೀಕ್ಷೆ ಪ್ರಾರಂಭಕ್ಕೆ ಮುನ್ನ ಪಿಯು ಫಲಿತಾಂಶ ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಜ್ಜಾಗಿದೆ.

ಏಪ್ರಿಲ್ 17ಕ್ಕೆ ದ್ವಿತೀಯ ಪಿಯುಸಿ ರಿಸಲ್ಟ್, ಇದೇ ಮೊದಲ ಬಾರಿ ಸಿಇಟಿ ಪರೀಕ್ಷೆಗೆ ಮುನ್ನವೇ ಫಲಿತಾಂಶ
ಏಪ್ರಿಲ್ 17ಕ್ಕೆ ದ್ವಿತೀಯ ಪಿಯು ರಿಸಲ್ಟ್
Published On :
ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 17ರಂದು ಪ್ರಕಟವಾಗಲಿದೆ. ಇದೇ ಮೊದಲ ಬಾರಿಗೆ ಸಿಇಟಿ ಪರೀಕ್ಷೆ ಪ್ರಾರಂಭಕ್ಕೆ ಮುನ್ನ ಪಿಯು ಫಲಿತಾಂಶ ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ  ಸಜ್ಜಾಗಿದೆ.
ಏಪ್ರಿಲ್ 29ರಿಂದ ಮೇ 1ರವರೆಗೆ ಸಿಇಟಿ ಪರೀಕ್ಷೆಗಳು ನಡೆಯಲಿದೆ. ಪಿಯುಸಿನಲ್ಲಿ ವಿಜ್ಞಾನ  ವಿಷಯ ಆಯ್ಕೆ ಮಾಡಿಕೊಂಡ ಬಹುತೇಕ ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದು ಇದಕ್ಕಾಗಿ ಅವರ ಅನುಕೂಲವನ್ನು ಗಮನದಲ್ಲಿರಿಸಿಕೊಂಡು ಮುಂಚಿತವಾಗಿ ಪರೀಕ್ಷಾ ಫಲಿತಾಂಶ ಬಹಿರಂಗಪಡಿಸುತ್ತಿದ್ದೇವೆ ಎಂದು ಪಿಯು ಇಲಾಖೆ ನಿರ್ದೇಶಕರಾಗಿದ್ದ ಪಿ.ಸಿ. ಜಾಫರ್ ಹೇಳಿದ್ದಾರೆ.
2019ನೇ  ಸಾಲಿನಲ್ಲಿ  6.73 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ ಒಟ್ಟು  1.94 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಲು ನೊಂದಾಯಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.