ದ್ವಿತೀಯ ಪಿಯುನಲ್ಲಿ ಉತ್ತಮ ಅಂಕ ಗಳಿಸಿದವರಿಗೆ ನಿಸ್ವಾರ್ಥ ಫೌಂಡೇಶನ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (2018-19 ಶೈಕ್ಷಣಿಕ ವರ್ಷ) ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ, ಉನ್ನತ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ಅಗತ್ಯವಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ

Published On :
ಬೆಂಗಳೂರು: ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (2018-19 ಶೈಕ್ಷಣಿಕ ವರ್ಷ) ಶೇ. 90 ಕ್ಕಿಂತ ಹೆಚ್ಚು ಅಂಕ ಗಳಿಸಿರುವ, ಉನ್ನತ ವಿದ್ಯಾಭ್ಯಾಸಕ್ಕಾಗಿ ಆರ್ಥಿಕ ನೆರವು ಅಗತ್ಯವಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ನಿಸ್ವಾರ್ಥ ಫೌಂಡೇಶನ್ ಮುಂದಾಗಿದೆ.
ಆರ್ಥಿಕ ನೆರವಿನ ಅಗತ್ಯವಿರುವ ಅರ್ಹ ವಿದ್ಯಾರ್ಥಿಗಳಿಂದ ನಿಸ್ವಾರ್ಥ ಫೌಂಡೇಶನ್ ಅರ್ಜಿಗಳನ್ನು ಆಹ್ವಾನಿಸಿದ್ದು, ಕೆಲವು ನಿಬಂಧನೆಗಳು ಅನ್ವಯವಾಗಲಿದೆ.
ಅರ್ಹ ವಿದ್ಯಾರ್ಥಿಗಳು www.nisvartha.org ವೆಬ್ ಸೈಟ್ ಮೂಲಕ ತಮ್ಮ ವಿವರಗಳ ಸಹಿತ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ ಸಂಸ್ಥೆಯವರು ವಿದ್ಯಾರ್ಥಿಗಳನ್ನು ಸಂಪರ್ಕಿಸುತ್ತಾರೆ. ಆರ್ಥಿಕ ನೆರವು ಅಗತ್ಯವಿರುವ ಅರ್ಹ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗುವ ನಿಟ್ಟಿನಲ್ಲಿ ನಿಸ್ವಾರ್ಥ ಫೌಂಡೇಶನ್ 2009 ರಿಂದ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
scholarshipವಿದ್ಯಾರ್ಥಿವೇತನNisvartha Foundation2nd pu studentsನಿಸ್ವಾರ್ಥ ಫೌಂಡೇಶನ್ದ್ವಿತೀಯ ಪಿಯು ವಿದ್ಯಾರ್ಥಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


