ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರಿಗೆ ಗೋಯೆಂಕಾ ಪ್ರಶಸ್ತಿ
:ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರಿಗೆ ಪ್ರತಿಷ್ಠಿತ ರಾಮನಾಥ ಗೋಯೆಂಕಾ ಪ್ರಶಸ್ತಿ ಲಭಿಸಿದೆ...

Published On :
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್ ದೊರೆಸ್ವಾಮಿ ಅವರಿಗೆ ಪ್ರತಿಷ್ಠಿತ ರಾಮನಾಥ ಗೋಯೆಂಕಾ ಪ್ರಶಸ್ತಿ ಲಭಿಸಿದೆ.
ಸೋಮವಾರ ನಗರದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರಿಗೆ ಜೀವಮಾನ ಸಾಧನೆಗಾಗಿ ಈ ಪ್ರಶಸ್ತಿ ನೀಡಲಾಗಿದೆ.
ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಉತ್ತಮ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
ಪ್ರಶಾಂತ್ ಗೊಯೆಂಕಾ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಪತ್ರಿಕೋದ್ಯಮ ಮುಕ್ತ ಹಾಗೂ ನಿಷ್ಪಕ್ಷಪಾತವಾಗಿರಬೇಕು. ರಾಮನಾಥ ಗೋಯೆಂಕಾ ಅವರ ಯೋಚನೆಗಳನ್ನು ವಾಪಸ್ ತರಲು ಈ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಹೇಳಿದರು.
ರಾಮ್ ನಾಥ್ ಗೋಯಂಕಾ ಚಾರಿಟೇಬಲ್ ಟ್ರಸ್ಟ್, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬಿಟಿವಿಯನ್ನು ತನಿಖಾ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಸಂಯುಕ್ತ ಕರ್ನಾಟಕ ಪತ್ರಿಕೆ, ರಾಜ್ ನ್ಯೂಸ್ ನ ಹಮೀದ್ ಪಾಳ್ಯ, ಟಿವಿ9 ಸಿಇಒ ಅಬ್ದುಲ್ ಹಕೀಂಗೆ ಗೊಯಂಕಾ ಅವಾರ್ಡ್ ಲಭಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬೆಂಗಳೂರುBengaluruLifetime AchievementHS Doreswamyಎಚ್.ಎಸ್ ದೊರೆಸ್ವಾಮಿಜೀವಮಾನದ ಸಾಧನೆRamnath Goenka Awardರಾಮನಾಥ್ ಗೋಯೆಂಕಾ ಪ್ರಶಸ್ತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


