ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಎರಡು ಆನೆಗಳ ಮೃತದೇಹ ಪತ್ತೆ
ಇಲ್ಲಿನ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಎರಡು ಆನೆಗಳ ಮೃತದೇಹಗಳು ಪತ್ತೆಯಾಗಿವೆ.

Published On :
ಚಾಮರಾಜನಗರ: ಇಲ್ಲಿನ ಕಾವೇರಿ ವನ್ಯಜೀವಿ ಅಭಯಾರಣ್ಯ ಮತ್ತು ಬಂಡೀಪುರ ಹುಲಿ ಮೀಸಲು ಅರಣ್ಯದಲ್ಲಿ ಎರಡು ಆನೆಗಳ ಮೃತದೇಹಗಳು ಪತ್ತೆಯಾಗಿವೆ.
ಕಾವೇರಿ ಅಭಯಾರಣ್ಯದ ಹನೂರು ಅರಣ್ಯ ವಲಯದಲ್ಲಿ 55 ವರ್ಷ ಪ್ರಾಯದ ಆನೆಯ ಮೃತದೇಹ ಮೊದಲು ಪತ್ತೆಯಾಯಿತು. ಗಸ್ತಿನಲ್ಲಿದ್ದ ಸಿಬ್ಬಂದಿ ಅದನ್ನು ನೋಡಿದ್ದಾರೆ. ಸ್ಥಳಕ್ಕೆ ಎಸಿಎಫ್ ಅಂಕರಾಜ್ ಮತ್ತು ಇತರರು ಭೇಟಿ ನೀಡಿ ಪರಿಶೀಲಿಸಿದರು. ಡಾ.ಸಿದ್ದರಾಜು ನೇತೃತ್ವದ ತಂಡ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ್ದು, ಇದು ಸ್ವಾಭಾವಿಕ ಸಾವು ಎಂದು ತಿಳಿಸಿದೆ.
40 ವರ್ಷ ಪ್ರಾಯದ ಮತ್ತೊಂದು ಆನೆಯ ಮೃತದೇಹ ಬಂಡೀಪುರ ನ್ಯಾಷನಲ್ ಪಾರ್ಕ್‌ನ ಮೂಲೆಹೊಳೆಯಲ್ಲಿ ಪತ್ತೆಯಾಗಿದೆ. ಮತ್ತೊಂದು ಆನೆಯೊಂದಿಗೆ ಜಗಳವಾಡಿದ ಪರಿಣಾಮ ಈ ಆನೆ ಸತ್ತಿರಬಹುದು ಎಂದು ಇದರ ಮರಣೋತ್ತರ ಪರೀಕ್ಷೆ ನಡೆಸಿದ ಡಾ.ನಾಗರಾಜ್ ತಿಳಿಸಿದ್ದಾರೆ. ಆನೆಯ ಹೊಟ್ಟೆ ಮತ್ತು ಇತರ ಭಾಗಗಳಲ್ಲಿ ಗಾಯದ ಗುರುತುಗಳಿದ್ದವು ಎಂದು ಅವರು ಮಾಹಿತಿ ನೀಡಿದ್ದಾರೆ.
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಬಾಲಚಂದ್ರ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಎರಡು ಆನೆಗಳನ್ನು ಅರಣ್ಯದೊಳಗೆ ಸುಡಲಾಯಿತು ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


