ಬೆಂಗಳೂರು: ಬೈಕ್ಗೆ ಬಸ್ ಢಿಕ್ಕಿ; ಪತ್ನಿ ಸಾವು, ಪತಿಗೆ ಗಂಭೀರ ಗಾಯ
ಬೆಂಗಳೂರು-ಹೊಸೂರು ಹೆದ್ದಾರಿಯ ಚಂದಾಪುರ ಮೇಲ್ಸೇತುವೆ ರಸ್ತೆಯಲ್ಲಿ ವೇಗವಾಗಿ ಬಂದ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಮೃತಪಟ್ಟರೆ ಪತಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

Published On :
ಬೆಂಗಳೂರು: ಬೆಂಗಳೂರು-ಹೊಸೂರು ಹೆದ್ದಾರಿಯ ಚಂದಾಪುರ ಮೇಲ್ಸೇತುವೆ ರಸ್ತೆಯಲ್ಲಿ ವೇಗವಾಗಿ ಬಂದ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಮೃತಪಟ್ಟರೆ ಪತಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತ ಮಹಿಳೆಯನ್ನು ನೆರಳೂರಿನ ರೇಣುಕಾ (25 ವರ್ಷ) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ರೇಣುಕಾ ಅವರ ಪತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೃತ ರೇಣುಕಾ ಪತಿಯೊಂದಿಗೆ ನೆರಳೂರಿನಲ್ಲಿ ವಾಸವಿದ್ದರು. ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಮೂಲದವರಾದ ದಂಪತಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು.
ಪೊಲೀಸ್ ಮೂಲಗಳು ತಿಳಿಸಿರುವಂತೆ ಹೊಸೂರಿನಿಂದ ಬೆಂಗಳೂರಿಗೆ ಹೊರಟಿದ್ದ ತಮಿಳುನಾಡಿಗೆ ಸೇರಿದ ಬಸ್ ಮಾರ್ಗಮಧ್ಯೆ ಚಂದಾಪುರ ಮೇಲುಸೇತುವೆ ರಸ್ತೆಯಲ್ಲಿ ಮುಂದೆ ಹೋಗುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದು ಅವರ ಮೇಲೆ ಮತ್ತೊಂದು ಬಸ್ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ಸೂರ್ಯ ಸಿಟಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


