ವಿವಾಹವಾಗಲು ಬೆಂಗಳೂರಿಗೆ ಬಂದಿದ್ದ ಪಾಕ್ ದಂಪತಿ ಗಡಿಪಾರಿಗೆ ಹೈಕೋರ್ಟ್ ಆದೇಶ
ಪಾಸ್ ಪೊರ್ಟ್, ವೀಸಾಗಲಿಲ್ಲದೆ ಮದುವೆಯಾಗಲಿಕ್ಕಾಗಿ ಬೆಂಗಳೂರಿಗೆ ಬಂದು ಇಲ್ಲಿಯೇ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಜೋಡಿಯನ್ನು ಮೇ 5ಒಳಗೆ ಗಡಿಪಾರು ಮಾಡಬೇಕೆಂದು ರಾಜ್ಯ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.

Published On :
ಬೆಂಗಳೂರು: ಪಾಸ್ ಪೊರ್ಟ್, ವೀಸಾಗಲಿಲ್ಲದೆ ಮದುವೆಯಾಗಲಿಕ್ಕಾಗಿ ಬೆಂಗಳೂರಿಗೆ ಬಂದು ಇಲ್ಲಿಯೇ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ ಜೋಡಿಯನ್ನು ಮೇ 5ಒಳಗೆ ಗಡಿಪಾರು ಮಾಡಬೇಕೆಂದು ರಾಜ್ಯ ಹೈಕೋರ್ಟ್ ಶುಕ್ರವಾರ ಆದೇಶಿಸಿದೆ.
ಪಾಕಿಸ್ತಾನದಿಂದ ಮದುವೆಯಾಗುವುದಕ್ಕಾಗಿ ಭಾರತಕ್ಕೆ ಆಗಮಿಸಿದ್ದ ಕಾಸೀಫ್ ಶಂಶುದ್ದೀನ್ ಮತ್ತು ಕಿರಾಣ್ ಗುಲಾಮ್ ಅಲಿ ಜೋಡಿ ಕಳೆದ ಕೆಲ ತಿಂಗಳಿನಿಂದ ಇಲ್ಲಿಯೇ ಅಕ್ರಮವಾಗಿ ನೆಲೆಸಿತ್ತು. ಈ ಸಂಬಂಧ ದೂರು ದಾಖಲಾಗಿ 42 ತಿಂಗಳ ಜೈಲುವಾಸದ ಶಿಕ್ಷೆಗೆ ಈ ಜೋಡಿ ಈಡಾಗಿತ್ತು. ಆಗ ತಮ್ಮ ಶಿಕ್ಷೆಯನ್ನು ಕಡಿತಗೊಳಿಸಿ ಬಿಡುಗಡೆಗೊಳಿಸಲು ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದ ಈ ನವಜೋಡಿಯ ಅರ್ಜಿಯನ್ನು ಶುಕ್ರವಾರ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಸಲಾಗಿದೆ.
ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್ ಅವರಿದ್ದ ಪೀಠ ಅರ್ಜಿ ವಿಚಾರಣೆ ನಡೆಸಿ ನಗರದ ಎರಡು ಪ್ರತ್ಯೇಕ ನ್ಯಾಯಾಲಯದಗಳು ಪಾಕ್ ಜೊಡಿಗೆ ವಿಧಿಸಿದ್ದ ಪ್ರತ್ಯೇಕ 21 ತಿಂಗಳ ಜೈಲು ಶಿಕ್ಷೆಯನ್ನು ಒಟ್ಟಾಗಿ ಜಾರಿಗೆ ತರಬೇಕು, ಹಾಗೆಯೇ ಎಲ್ಲಾ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿ ಮೇ 5ಕ್ಕೆ ಮುನ್ನ ಅರ್ಜಿದಾರರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು ಎಂದು ಆದೇಶಿಸಿದ್ದಾರೆ.
ಇದಕ್ಕೆ ಮುನ್ನ ಕೇಂದ್ರ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ನಾವದಗಿ, ಅರ್ಜಿದಾರರು ನಿಜಕ್ಕೂ ಪಾಕಿಸ್ತಾನದವರೇ ಆಗಿದ್ದಾರೆಯೆ ಎನ್ನುವ್ದನ್ನು ಖಚಿತಪಡಿಸಿಕೊಳ್ಲಬೇಕು, ಪಾಕಿಸ್ತಾನ ರಾಯಭಾರ ಕಛೇರಿಯೊಡನೆ ಈ ಸಂಬಂಧ ಮಾತುಕತೆ ನಡೆಯಬೇಕು, ಇದಕ್ಕಾಗಿ ಸಮಯ ಹಿಡಿಯಲಿದೆ ಎಂದಾಗ ನ್ಯಾಯಮೂರ್ತಿಗಳು "ಅರ್ಜಿದಾರರು ತಾವೇ ಸ್ವತಃ ನಾವು ಪಾಕಿಸ್ತಾನಿಗಳು ಎಂದು ಒಪ್ಪಿಕೊಂಡಿದ್ದಾರೆ, ಇನ್ನು ಅವರನ್ನೇಕೆ ದೇಶದಲ್ಲಿರಿಸಿಕೊಳ್ಲಬೇಕು? ಇದು ದೇಶದ ಭದ್ರತೆ ವಿಚಾರವಾಗಿದ್ದು ಇನ್ನು ಮುಂದಿನ 24 ಗಂಟೆಯಲ್ಲಿ ಅರ್ಜಿದಾರರನ್ನು ವಾಘಾ ಗಡಿಗೆ ಕಳಿಸಿ" ಎಂದು ಆದೇಶಿಸಿದರು.
ಕಡೆಗೆ ನಾವದಗಿ ನಾಳೆ ನಾಡಿಉದ್ದುಶನಿವಾರ-ಭಾನುವಾರವಾಗಿದೆ, ಹಾಗಾಗಿ ರಾಯಭಾರ ಕಛೇರಿ ರಜೆ ಇರಲಿದೆ,24 ಗಂತೆ ಸಾಲದು ಎಂದಾಗ ಕೋರ್ಟ್ ಸಮ್ಮತಿಸಿದ್ದು ಮೇ 5 ರೊಳಗೆ ಪಾಕಿಸ್ತಾನಕ್ಕೆ ಗಡಿಪಾರು ಮಾಡಿ ಎಂದು ನಿರ್ದೇಶಿಸಿ ಅರ್ಜಿ ಇತ್ಯರ್ಥಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಕರ್ನಾಟಕ ಹೈಕೋರ್ಟ್Karnataka HCIllegal immigrantsಅಕ್ರಮ ವಲಸೆಗಾರರುPakistani coupleಪಾಕಿಸ್ತಾನಿ ದಂಪತಿಗಳು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


