ಅಕ್ರಮ ಗಣಿಗಾರಿಕೆ: ಕಾಂಗ್ರೆಸ್ ಶಾಸಕ ನಾಗೇಂದ್ರ ಪೊಲೀಸ್ ಕಸ್ಟಡಿಗೆ
ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾಲಯದ ಮುಂದೆ ಹಾಜರಾದ ವೇಳೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಗೈರು ಹಾಜರಾಗಿದ್ದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಇಂದು ನ್ಯಾಯಾಲಯದ ಮುಂದೆ ಹಾಜರಾದ ವೇಳೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಸಮನ್ಸ್ ಜಾರಿ ಮಾಡಿದ್ದರೂ ನ್ಯಾಯಾಲಯದ ಆದೇಶ ಪಾಲಿಸದ ನಾಗೇಂದ್ರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.ಸೋಮವಾರ ನ್ಯಾಯಾಲಯದ ಮುಂದೆ ಹಾಜರಾದ ನಾಗೇಂದ್ರ ಅವರನ್ನು ನ್ಯಾಯಾಧೀಶರು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ.
'ಹಿಂದೆ ಅನೇಕ ಬಾರಿ ಸಮನ್ಸ್ ನೀಡಿದ್ದರೂ, ಅದನ್ನು ಪಾಲಿಸದ ನಡವಳಿಕೆಯನ್ನು ನೀವು ಬೆಳೆಸಿಕೊಂಡಿದ್ದೀರಿ. ಜಾಮೀನು ರಹಿತ ವಾರೆಂಟ್ ರದ್ದುಗೊಂಡು ದೋಷ ಮುಕ್ತಗೊಳ್ಳಲಿದ್ದೇನೆ ಎಂದು ನೀವು ಭಾವಿಸಿದ್ದೀರಿ. ಆದರೆ, ಹಾಗೆ ಆಗುವುದಿಲ್ಲ' ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


