ಮೇ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಪತ್ರಕರ್ತ ಹೇಮಂತ್ ಕುಮಾರ್
ಪ್ರತ್ಯೇಕ ಲಿಂಗಾಯತ ಧರ್ಮದ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪ ಎದುರಿಸುತ್ತಿರುವ ಪತ್ರಕರ್ತ ಹೇಮಂತ್ ಕುಮಾರ್ ಅವರನ್ನು 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿವಾದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸೃಷ್ಟಿಸಿರುವ ಆರೋಪ ಎದುರಿಸುತ್ತಿರುವ ಪತ್ರಕರ್ತ ಹೇಮಂತ್ ಕುಮಾರ್ ಅವರನ್ನು 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.
ಕಳೆದ ಮೂರು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಹೇಮಂತ್ ಕುಮಾರ್ ಅವರನ್ನು ಇಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಅವರನ್ನು ಮೇ 9ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ.
ಹೇಮಂತ್ ಕುಮಾರ್ ಪ್ರಕರಣದಲ್ಲಿ ತನಿಖಾಧಿಕಾರಿಗಳು ಆಕ್ಷೇಪಣೆ ಸಲ್ಲಿಸಬೇಕಿದ್ದು, ಆರೋಪಿಯ ಜಾಮೀನು ಅರ್ಜಿಯ ವಿಚಾರಣೆ ಕೂಡ ನಡೆಯಬೇಕಿರುವುದರಿಂದ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುತ್ತಿದೆ ಎಂದು ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಆದೇಶ ನೀಡಿದರು. ಮೇ 2ರಂದು ಹೇಮಂತ್ ಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


