ಬೆಂಗಳೂರು: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ರಸ್ತೆ ತಡೆದು ಪ್ರತಿಭಟನೆ
50 ವರ್ಷದ ಕಾಮಾಂಧನೊಬ್ಬ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದರ ವಿರುದ್ಧ ಆಕ್ರೋಶಗೊಂಡ ನಾರಾಯಣಸ್ವಾಮಿ ಲೇಔಟಿನ ನೂರಾರು ನಿವಾಸಿಗಳು ಜೆಸಿ ನಗರ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಬೆಂಗಳೂರು: 50 ವರ್ಷದ ಕಾಮಾಂಧನೊಬ್ಬ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದರ ವಿರುದ್ಧ ಆಕ್ರೋಶಗೊಂಡ ನಾರಾಯಣಸ್ವಾಮಿ ಲೇಔಟಿನ ನೂರಾರು ನಿವಾಸಿಗಳು ಜೆಸಿ ನಗರ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.
ನಾರಾಯಣಸ್ವಾಮಿ ಲೇಔಟ್ ನಿವಾಸಿ ಮೊಹಮ್ಮದ್ ಅನ್ವಾರ್ ಬಂಧಿತ ಆರೋಪಿ. ಈತನ ಮೊಮ್ಮಗಳ ಜೊತೆಗೆ ಆಟವಾಡಲು ಮನೆಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಸಂಜೆ ಬಾಲಕಿ ಮನೆಗೆ ಬಂದಾಗ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ತಾಯಿ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರಿಶೀಲನೆ ನಡೆಸಿದಾಗ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವಾಗಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಸುದ್ದಿ ತಿಳಿದು ಅನ್ವಾರ್ ಮನೆಗೆ ಹೋದ ಬಾಲಕಿಯ ಕುಟುಂಬಸ್ಥರು ಆತನನ್ನು ಹೊಡೆಯಲು ಪ್ರಯತ್ನಿಸಿದ್ದಾರೆ. ಆದರೆ, ಆತ ತಪ್ಪಿಸಿಕೊಂಡಿದ್ದಾನೆ. ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಇಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಭಯವಾಗಿದೆ. ನಮಗೆ ನ್ಯಾಯ ಬೇಕಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆಯಾಗಬೇಕಿದೆ ಎಂದು ಸ್ಥಳೀಯ ನಿವಾಸಿ ಶೈಲಾಭಾನು ಆಗ್ರಹಿಸಿದ್ದಾರೆ.
ಇಂತಹವರಿಗೆ ಶಿಕ್ಷೆಯಾಗದಿದ್ದರೆ ಇಂತಹ ಮಕ್ಕಳು ಹಾಗೂ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತವೆ. ತಮ್ಮ ಮಗಳಿಗೆ ನ್ಯಾಯ ಬೇಕಾಗಿದೆ ಎಂದು ಬಾಲಕಿಯ ತಾಯಿ ಆಗ್ರಹಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


