ರಾಜ್ಯ

ಎಸ್ಎಸ್ಎಲ್‏ಸಿ ಪರೀಕ್ಷೆ ಫಲಿತಾಂಶ: ಮಾಗಡಿಯ ಎಂ.ಜಿ. ಚೈತನ್ಯಗೌಡ ರಾಮನಗರ ಜಿಲ್ಲೆಗೆ ಪ್ರಥಮ

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರೇಷ್ಮೆ ನಗರ ರಾಮನಗರ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುುವ ಮೂಲಕ ಅದ್ವಿತೀಯ ಸಾಧನೆ ಮಾಡಿದೆ.

ಎಸ್ಎಸ್ಎಲ್‏ಸಿ ಪರೀಕ್ಷೆ ಫಲಿತಾಂಶ: ಮಾಗಡಿಯ ಎಂ.ಜಿ. ಚೈತನ್ಯಗೌಡ  ರಾಮನಗರ ಜಿಲ್ಲೆಗೆ ಪ್ರಥಮ
ಎಂ. ಜಿ. ಚೈತನ್ಯಗೌಡ
Published On :
ಮಾಗಡಿ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರೇಷ್ಮೆ ನಗರ ರಾಮನಗರ ರಾಜ್ಯಕ್ಕೆ ಎರಡನೇ ಸ್ಥಾನ ಪಡೆಯುುವ ಮೂಲಕ ಅದ್ವಿತೀಯ ಸಾಧನೆ ಮಾಡಿದೆ.
ನಾಡಪ್ರಭು ಕೆಂಪೇಗೌಡರ ತವರು ಮಾಗಡಿಯ ವಾಸವಿ ವಿದ್ಯಾನಿಕೇತನ್ ಶಾಲೆಯ ಚೈತ್ಯನ್ಯ ಗೌಡ ಎಂ.ಜಿ.  ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ  625ಕ್ಕೆ 623 ಅಂಕಗಳನ್ನು ಪಡೆದುಕೊಳ್ಳುವ ಮೂಲಕ  ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು 19 ಮಂದಿ 623 ಅಂಕಗಳನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಚೈತನ್ಯ ಗೌಡ ಕೂಡಾ ಒಬ್ಬರಾಗಿದ್ದಾರೆ.
ಗೋಪಾಲಗೌಡ ಹಾಗೂ ಎಸ್.ಎನ್. ರವಿಕಲಾ ದಂಪತಿಯ ಪುತ್ರಿಯಾದ ಚೈತನ್ಯಗೌಡ ಕನ್ನಡದಲ್ಲಿ 124, ಇಂಗ್ಲೀಷ್ ನಲ್ಲಿ 100, ಹಿಂದಿ 99, ಗಣಿತ 100, ವಿಜ್ಞಾನ 100 ಹಾಗೂ ಸಮಾಜ ವಿಜ್ಞಾನದಲ್ಲಿ  100 ಅಂಕ ಗಳಿಸುವ ಮೂಲಕ ನಾಡಪ್ರಭು ಕೆಂಪೇಗೌಡ ಅವರ ಊರಿಗೆ ಕೀರ್ತಿ ತಂದಿದ್ದಾರೆ.
Story image

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.