ರಾಜ್ಯದಲ್ಲಿ ರಸಗೊಬ್ಬರದ ಕೊರತೆಯಿಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಪಪಡಿಸಿದ್ದಾರೆ. ಕೇಂದ್ರ ಸರ್ಕಾರಕ್ಕೆ 75 ಸಾವಿರ ಟನ್ ಯೂರಿಯಾ ಪೂರೈಕೆಗೆ ಬೇಡಿಕೆ ಸಲ್ಲಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
Published On :
ಬೆಂಗಳೂರು: ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಪಪಡಿಸಿದ್ದಾರೆ.
ಕೇಂದ್ರ ಸರ್ಕಾರಕ್ಕೆ 75 ಸಾವಿರ ಟನ್ ಯೂರಿಯಾ ಪೂರೈಕೆಗೆ ಬೇಡಿಕೆ ಸಲ್ಲಿಸಲಾಗಿದ್ದು, ಆದಷ್ಟು ಶೀಘ್ರದಲ್ಲಿ ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ವಿಧಾನ ಸೌಧದಲ್ಲಿ ಇಂದು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ, ಹಾವೇರಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ರಸಗೊಬ್ಬರದ ಕೊರತೆ ಬಗ್ಗೆ ಮಾಹಿತಿ ಪಡೆದರು.
ಡಿಎಪಿ ಮತ್ತು 20: 20 ಖರೀದಿ ಜೊತೆಗೆ ಯೂರಿಯಾ ಖರೀದಿ ಮಾಡುವಂತೆ ಮಾರಾಟಗಾರರ ಮೇಲೆ ಒತ್ತಡ ಹೇರುವುದು, ಗೊಬ್ಬರ ದಾಸ್ತಾನು ಲಭ್ಯವಿಲ್ಲ ಎಂಬ ದೂರುಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಹೆಚ್ಚಿನ ಗೊಬ್ಬರ ಪೂರೈಕೆಗೆ ಕೇಂದ್ರ ಸರ್ಕಾರದ ಸಚಿವರ ಜೊತೆ ಯಡಿಯೂರಪ್ಪ ಚರ್ಚೆ ನಡೆಸಿ ಹೆಚ್ಚಿನ ಗೊಬ್ಬರ ದಾಸ್ತಾನು ಸಂಗ್ರಹಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

