ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ: ಆಗಸ್ಟ್ ಅಂತ್ಯದವರೆಗೆ ಅವಧಿ ವಿಸ್ತರಣೆ
ರಾಜ್ಯದಲ್ಲಿ ಉದ್ಭವಿಸಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ...

Published On :
ಬೆಂಗಳೂರು: ರಾಜ್ಯದಲ್ಲಿ ಉದ್ಭವಿಸಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ಅವಧಿಯನ್ನು ವಿಸ್ತರಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಆಗಸ್ಟ್ ಅಂತ್ಯದವರೆಗೆ ಟ್ಯಾಂಕರ್ ಗಳಲ್ಲಿ ನೀರು ಪೂರೈಸಲು ಸರ್ಕಾರ ಆದೇಶ ಹೊರಡಿಸಿದೆ.
2018-19ನೇ ಸಾಲಿನಲ್ಲಿ ರಾಜ್ಯದಲ್ಲಿ ಮಳೆ ಕೊರತೆಯಿಂದ ಮುಂಗಾರು ಹಂಗಾಮಿನಲ್ಲಿ 100 ತಾಲೂಕುಗಳನ್ನು ಹಾಗೂ ಹಿಂಗಾರು ಹಂಗಾಮಿನಲ್ಲಿ 156 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ.
ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲು 90 ದಿನಗಳ ನಿರ್ಬಂಧಗಳನ್ನು ಸಡಿಸಿಲಿ ಮೇ 2019 ಅಂತ್ಯದವರೆಗೆ ವಿಸ್ತರಿಸಿ ಸೂಚನೆ ನೀಡಲಾಗಿತ್ತು. ಈಗ ಅದನ್ನು ಮತ್ತೆ ವಿಸ್ತರಿಸಿ ಆಗಸ್ಟ್ ಅಂತ್ಯದವರೆಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


