ಚಿತ್ರದುರ್ಗ: ಪತಿಯ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆಗೆ ಯತ್ನ, ಮಗು ಸಾವು
ಕೌಟುಂಬಿಕ ಕಲಹದಿಂದ ಶನಿವಾರ ಪತಿ ನೇಣಿಗೆ ಶರಣಾಗಿದ್ದು, ಇದರಿಂದ ಮನನೊಂದ ಪತ್ನಿ ಮಗುವಿನೊಂದಿಗೆ ಲಾರಿ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ..

Published On :
ಚಿತ್ರದುರ್ಗ: ಕೌಟುಂಬಿಕ ಕಲಹದಿಂದ ಶನಿವಾರ ಪತಿ ನೇಣಿಗೆ ಶರಣಾಗಿದ್ದು, ಇದರಿಂದ ಮನನೊಂದ ಪತ್ನಿ ಮಗುವಿನೊಂದಿಗೆ ಲಾರಿ ಕೆಳಕ್ಕೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಮಗು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಖಜಾನೆ ಇಲಾಖೆಯಲ್ಲಿ ಮುಖ್ಯ ಲೆಕ್ಕಿಗನಾಗಿ ಕಾರ್ಯನಿರ್ವಹಿಸುತ್ತಿದ್ದ ನಾರಾಯಣಪ್ಪ (35) ಕೆಳಗೋಟೆ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ಶನಿವಾರ ನೇಣಿಗೆ ಶರಣಾಗಿದ್ದರು.
ಇದನ್ನು ಕಂಡ ಅವರ ಪತ್ನಿ ರಮ್ಯಾ (30), ತಮ್ಮ 2 ವರ್ಷದ ಹೆಣ್ಣುಮಗು ಆದ್ಯಾಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದರು.
ಹೀಗಾಗಿ ಹತ್ತಿರದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ ಬಳಿ ಹಾದುಹೋಗುತ್ತಿದ್ದ ಲಾರಿ ಎದುರು ಮಗುವಿನೊಂದಿಗೆ ಅವರು ಜಿಗಿದಿದ್ದಾರೆ. ಘಟನೆಯಲ್ಲಿ ಮಗು ಮೃತಪಟ್ಟರೆ, ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


