ರಾಜ್ಯ

ಬೆಂಗಳೂರು: 7 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!

ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಏಳು ವರ್ಷ ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: 7 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!
ಬೆಂಗಳೂರು: 7 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ!
Published On :
ಬೆಂಗಳೂರು: ಕೌಟುಂಬಿಕ ಜಗಳದ ಹಿನ್ನೆಲೆಯಲ್ಲಿ ಏಳು ವರ್ಷ ಮಗುವನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜ್ಯೋತಿ ಎಂಬಾಕೆ ಮಗಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಜ್ಯೋತಿ ತನ್ನ ಏಳು ವರ್ಷದ ಶಾಬುನಾ ಎಂಬ ಹೆಣ್ಣು ಮಗುವನ್ನು ಕೊಂದು ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಂಕಜ್ ಎಂಬವರ ಜೊತೆ ಹನ್ನೆರಡು ವರ್ಷಗಳ ಜ್ಯೋತಿಗೆ ಮದುವೆಯಾಗಿತ್ತು. ಪತಿ ಪಂಕಜ್ ಅವರು ಆಶೋಕ ಪಿಲ್ಲರ್ ಬಳಿ ಹಾರ್ಡ್ ವೇರ್ ಅಂಗಡಿ ಇಟ್ಟುಕೊಂಡಿದ್ದರು. ನಿನ್ನೆ ದಂಪತಿ ನಡುವೆ ಕ್ಷುಲ್ಲಕ ವಿಚಾರಕ್ಕೆ ಜಗಳ ಉಂಟಾಗಿದೆ. ಜಗಳದ ಬಳಿಕ ಬೇಸರಗೊಂಡ ಪತಿ ಮನೆಯಿಂದ ಹೊರಗೆ ಹೋಗಿದ್ದಾರೆ. ಆ ವೇಳೆ ಜ್ಯೋತಿ ತನ್ನ ಮಗಳನ್ನು ಕೊಂದು ಕಟ್ಟಡದಿಂಡ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆ ಕುರಿತಂತೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.