ಮೇಯರ್ ಗಂಗಾಂಬಿಕೆಗೆ ಬಿತ್ತು ದಂಡ!
ನೂತನ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭ ಕೋರಿದ್ದ ಮೇಯರ್ ಗಂಗಾಂಬಿಕೆ ಒಣಹಣ್ಣಿನ ಬುಟ್ಟಿಯನ್ನು ಉಡುಗೊರೆಯಾಗಿ ನೀಡಿ ಪೋಟೊ...

Published On :
ಬೆಂಗಳೂರು: ಪ್ಲಾಸ್ಟಿಕ್ ನಿಷೇಧ ಜಾರಿಯಲ್ಲಿರುವುದನ್ನು ಮರೆತು ಪ್ಲಾಸ್ಟಿಕ್ ಬಳಸಿ ಪ್ಯಾಕ್ ಮಾಡಿದ ಹಣ್ಣಿನ ಬುಟ್ಟಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ನೀಡಿದ ಮೇಯರ್ ಗಂಗಾಂಬಿಕೆ ಅವರಿಗೆ ಬಿಬಿಎಂಪಿಯಿಂದಲೇ 500 ರೂ. ದಂಡ ವಿಧಿಸಲಾಗಿದೆ. .
ಪರಿಸರಕ್ಕೆ ಹಾನಿ ಮಾಡುವ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಮೇಯರ್ ಗಂಗಾಂಬಿಕೆ ನಗರದಾದ್ಯಂತ ಅಭಿಯಾನ ನಡೆಸುತ್ತಿದ್ದಾರೆ. ಶಾಲಾ-ಕಾಲೇಜು ಮಕ್ಕಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಅರಿವು ಮೂಡಿಸುತ್ತಿದ್ದಾರೆ.
ಆದರೆ ಜು.30 ರಂದು ನೂತನ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಶುಭ ಕೋರಿದ್ದ ಮೇಯರ್ ಗಂಗಾಂಬಿಕೆ ಒಣಹಣ್ಣಿನ ಬುಟ್ಟಿಯನ್ನು ಉಡುಗೊರೆಯಾಗಿ ನೀಡಿ ಪೋಟೊ ತೆಗೆಸಿಕೊಂಡಿದ್ದರು.
ಇದೇ ಪೋಟೊಗೆ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ಕೇಳಿಬಂದಿತ್ತು. ಪ್ಲಾಸ್ಟಿಕ್ ಬಳಕೆ ನಿಷೇಧ ಇದ್ದರೂ ಮೇಯರ್ ಅವರು ಪ್ಲಾಸ್ಟಿಕ್‌ನಿಂದ ಸುತ್ತಿದ್ದ ಒಣಹಣ್ಣಿನ ಬುಟ್ಟಿಯನ್ನು ನೀಡಿರುವುದು ಟೀಕೆಗೊಳಗಾಗಿತ್ತು.
ಈ ಬೆಳವಣಿಗೆ ಬಳಿಕ ಮೇಯರ್ ಅವರಿಗೆ ಬಿಬಿಎಂಪಿ ಆರೋಗ್ಯ ಅಧಿಕಾರಿಗಳು 500 ರೂ. ದಂಡ ವಿಧಿಸಿ ರಶೀದಿ ಕೊಟ್ಟಿದ್ದಾರೆ. ತಮ್ಮ ತಪ್ಪಿನ ಅರಿವಾಗಿರುವ ಮೇಯರ್ ಗಂಗಾಂಬಿಕೆ, ಮುಂದೆ ಎಂದೂ ಪ್ಲಾಸ್ಟಿಕ್ ಬಳಸಿರುವ ಪ್ಯಾಕ್ ಮಾಡಿದ ಉಡುಗೊರೆ ಕೊಡುವುದಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


