ಬಿಜೆಪಿ ಸಂಸದ ಕಟೀಲ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ
ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ...

Published On :
ಬೆಂಗಳೂರು: ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ವಿರುದ್ಧ ಇಲ್ಲಿನ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.
ಹಲವಾರು ದಿನಾಂಕಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗಲು ಸಮನ್ಸ್ ನೀಡಿದ್ದರೂ ಕಟೀಲ್ ಅವರು ನ್ಯಾಯಾಲಯಕ್ಕೆ ಹಾಜರಾಗಲು ವಿಫಲರಾಗಿರುವುದರಿಂದ ನ್ಯಾಯಾಧೀಶ ಚನ್ನಪ್ಪ ಡಿ ಹುದ್ದಾರ್ ಅವರು ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದ್ದಾರೆ.
ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


