ಬೆಂಗಳೂರು: ವ್ಹೀಲಿಂಗ್ ವೀರರಿಗೆ ಗ್ರಾಮಸ್ಥರಿಂದ ಧರ್ಮದೇಟು!
ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ತಲಘಟ್ಟಪುರದ ಬಳಿಯ ಹೆಮ್ಮಿಗೆಪುರದ ಗ್ರಾಮಸ್ಥರು ಹಿಡಿದು ಧರ್ಮದೇಟು ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ....

Published On :
ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ತಲಘಟ್ಟಪುರದ ಬಳಿಯ ಹೆಮ್ಮಿಗೆಪುರದ ಗ್ರಾಮಸ್ಥರು ಹಿಡಿದು ಧರ್ಮದೇಟು ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ.
ನೈಸ್ ರಸ್ತೆಯ ಹೆಮ್ಮಿಗೆಪುರದ ಬಳಿ ಎರಡು ಸ್ಕೂಟರ್‍ಗಳಲ್ಲಿ ನಾಲ್ವರು ಯುವಕರು ವೀಲಿಂಗ್ ಮಾಡುತ್ತಿರುವುದದನ್ನು ನೋಡಿದ ಹೆಮ್ಮಿಗೆಪುರದ ಗ್ರಾಮಸ್ಥರು ಅವರನ್ನು ತಡೆದು, ಹಿಗ್ಗಾಮುಗ್ಗಾ ಥಳಿಸಿ ಮತ್ತೊಮ್ಮೆ ವೀಲಿಂಗ್ ಮಾಡದಂತೆ ಎಚ್ಚರಿಕೆ ಕೊಟ್ಟಿದ್ದಾರೆ.
ಗ್ರಾಮಸ್ಥರಿಂದ ಗೂಸಾ ತಿಂದ ಯುವಕರ ಹೆಸರು ತಿಳಿದು ಬಂದಿಲ್ಲ. ಗ್ರಾಮಸ್ಥರು ಯುವಕರನ್ನು ಥಳಿಸಿದ್ದು ಅಷ್ಟೇ ಅಲ್ಲದೆ ಸ್ಕೂಟರ್ ಗಳಿಗೆ ಕಲ್ಲು, ಕೋಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ.
ಇತ್ತೀಚೆಗಷ್ಟೇ ಸ್ಕೂಟರ್‍ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರು ಡಿಕ್ಕಿ ಹೊಡೆದು ಹೆಮ್ಮಿಗೆಪುರದ ಸಿದ್ದಪ್ಪ ಎನ್ನುವರ ಕಾಲು ಮುರಿದಿತ್ತು.ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ವೀಲಿಂಗ್ ಮಾಡುವ ಯುವಕರಿಗೆ ಪಾಠ ಕಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


